ಅಕ್ಟೋಬರ್‌ 16ರ ವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರ ವರೆಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲೂ ಕೂಡ ಮಳೆಯಾಗಲಿದೆ.
ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮುಂದಿನ 24 ಗಂಟೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ
ಚಿತ್ರದುರ್ಗದಲ್ಲಿ ಮಳೆ ಅಬ್ಬರಕ್ಕೆ ಹೊಸದುರ್ಗ ತಾಲೂಕಿನ ಮಾಚೇನಹಳ್ಳಿ ಗ್ರಾಮ ಸರ್ಕಾರಿ ಶಾಲೆ ಜಲಾವೃತವಾಗಿತ್ತು. ಶಾಲೆಯೊಳಗಿನ ಪುಸ್ತಕ, ದಾಖಲೆಗಳು, ಪೀಠೋಪಕರಣ, ಆಟದ ಸಾಮಾಗ್ರಿಗಳು ನೀರುಪಾಲಾಗಿವೆ. ಬಾಗಲಕೋಟೆ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ತಗಡಿನ ಶೆಡ್ ಕುಸಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement