ಪಿಆರ್ ಕಂಪನಿ ಮೇಲೆ ಆದಾಯ ತೆರಿಗೆ ದಾಳಿ

ಬೆಂಗಳೂರು: ಪ್ರಮುಖ ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಕಂಪೆನಿಯೊಂದರ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಗರದ ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಡಿಸೈನ್ ಬಾಕ್ಸ್ ಎಂಬ ಪಿಆರ್ ಕಂಪೆನಿಯ ಮೇಲೆ ಎಂಟು ಮಂದಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಇದೇ ವೇಳೆ ಐವರು ಅಧಿಕಾರಿಗಳ ಮತ್ತೊಂದು ತಂಡ ಕಂಪೆನಿಯ ಮುಖ್ಯಸ್ಥ ನರೇಶ್ ಅಗರ್ವಾಲ್ ತಂಗಿದ್ದ ಜೆಡಬ್ಲ್ಯೂ ಮ್ಯಾರಿಯೇಟ್ ಹೊಟೇಲ್ ಮೇಲೆ ಕೂಡ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಈ ಕಂಪೆನಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯುವ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಸೇರಿದಂತೆ ವಿವಿಧ ರಾಜಕೀಯ ಮುಖಂಡರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಮಾಡುತ್ತಿತ್ತು ಎನ್ನಲಾಗಿದೆ.
ಹಲವಾರು ನಾಯಕರಿಗೆ ಪಿಆರ್ ಕಂಪೆನಿಯಾಗಿ ಕೆಲಸ ಮಾಡಿದ್ದ ಡಿಸೈನ್ ಬಾಕ್ಸ್ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟ ಆದಾಯ ತೆರಿಗೆ ಅಧಿಕಾರಿಗಳು ರಹಸ್ಯವಾಗಿ ಮಾಹಿತಿ ಕಲೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ದಾಳಿ ನಡೆಸ ತಪಾಸಣೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement