ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್​ ಖರೆ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್​ ಅಧಿಕಾರಿ ಅಮಿತ್​ ಖರೆ ಇಂದು (ಮಂಗಳವಾರ) ನೇಮಕವಾಗಿದ್ದಾರೆ.
ಅಮಿತ್​ ಖರೆ ಅವರು 1985ನೇ ಬ್ಯಾಚ್​​ನ ಐಎಎಸ್​ ಅಧಿಕಾರಿಯಾಗಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದಾರೆ. ಉನ್ನತ ಶಿಕ್ಷಣ ಕಾರ್ಯದರ್ಶಿಯೂ ಆಗಿದ್ದ ಅವರು ಸೆಪ್ಟೆಂಬರ್​ 30ರಂದು ನಿವೃತ್ತರಾಗಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕವಾಗಿದ್ದಾರೆ.
ಅಮಿತ್​ ಖರೆಯವರನ್ನು ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರನ್ನಾಗಿ ನೇಮಕ ಮಾಡಲು ಕ್ಯಾಬಿನೆಟ್​​ನ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಅದರ ಅನ್ವಯ ಇನ್ನುಮುಂದೆ ಅಮಿತ್​ ಖರೆ ಪ್ರಧಾನಿ ಸಲಹೆಗಾರರಾಗಿ ಪ್ರಧಾನಮಂತ್ರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಕಾರ್ಯದರ್ಶಿ ಶ್ರೇಣಿಗೆ ಅನ್ವಯ ಆಗುವ ಎಲ್ಲ ಷರತ್ತುಗಳೂ ಅನ್ವಯ ಆಗುತ್ತವೆ. ಎರಡು ವರ್ಷಗಳ ಅವಧಿಗೆ ಸದ್ಯ ನೇಮಕ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.
ಅಮಿತ್​ ಖರೆ ಅತ್ಯಂತ ಸಮರ್ಥ ಅಧಿಕಾರಿ ಎಂದು ಹೆಸರುಗಳಿಸಿದ್ದಾರೆ. ಈ ಹಿಂದೆ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಡಿಜಿಟಲ್​ ಮೀಡಿಯಾ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ತರಲು ಶ್ರಮಿಸಿದ್ದರು. ಅಷ್ಟೇ ಅಲ್ಲ, ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿಯ ಮೇಲ್ವಿಚಾರಣೆ ನೋಡಿಕೊಂಡಿದ್ದರು.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement