2ರಿಂದ 18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ತುರ್ತು ಬಳಕೆಗೆ ಇನ್ನೂ ಅನುಮತಿ ನೀಡಿಲ್ಲ:ಡಾ. ಭಾರತಿ ಪವಾರ್

ನವದೆಹಲಿ: ಕೋವಿಡ್ -19 ರ ವಿಷಯ ತಜ್ಞರ ಸಮಿತಿಯು 2-18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿತ್ತು. ಆದರೆ ಕೋವಾಕ್ಸಿನ್ ಕೋವಿಡ್-19 ಲಸಿಕೆ 2-18 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಡಿಜಿಸಿಐ ಇನ್ನೂ ಅನುಮೋದನೆ ನೀಡಿಲ್ಲ. ಇನ್ನೂ ಅದರ ಮೌಲ್ಯಮಾಪನ ನಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಡಾ. ಭಾರತಿ ಪ್ರವೀಣ ಪವಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿ ಮಾಹಿತಿ ನೀಡಿರುವ ಅವರು, ಭಾರತ್ ಬಯೋಟೆಕ್ ನ ಕೋವಿಡ್-19 ಲಸಿಕೆ ಕೋವಾಕ್ಸಿನ್ ( Bharat Biotech’s COVID-19 vaccine COVAXIN ) ಕುರಿತಂತೆ ಕೆಲವು ಗೊಂದಲಗಳ ಸ್ಪಷ್ಟನೆಗೆ ತಜ್ಞರ ಸಮಿತಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಇಲ್ಲಿಯವರೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (Drugs Controller General of India (DCGI) ಅದನ್ನು ಅನುಮೋದಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲ ಗಂಟೆಗಳ ಹಿಂದಷ್ಟೇ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಬಳಕೆಗಾಗಿ ತಜ್ಞರ ಸಮಿತಿಯು ಸಭೆಯಲ್ಲಿ ಡಿಸಿಜಿಐಗೆ ಶಿಫಾರಸ್ಸು ಮಾಡಿದ್ದಾಗಿ ವರದಿಯಾಗಿತ್ತು. ಹೀಗೆ ವರದಿಯಾದ ಕೆಲ ಗಂಟೆಗಳಲ್ಲಿಯೇ ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಡಾ.ಭಾರತಿ ಪ್ರವೀಣ ಪವಾರ್ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೂ ಮೊದಲು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸೆಪ್ಟೆಂಬರ್‌ನಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ -2 ಮತ್ತು ಹಂತ -3 ಪ್ರಯೋಗಗಳನ್ನು ಪೂರ್ಣಗೊಳಿಸಿತ್ತು ಮತ್ತು ಈ ತಿಂಗಳ ಆರಂಭದಲ್ಲಿ ಟ್ರಗ್ ಡೇಟಾವನ್ನು ಡ್ರಗ್ಸ್ ಮತ್ತು ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಸಲ್ಲಿಸಿತ್ತು. ವಿವರವಾದ ಚರ್ಚೆಯ ನಂತರ 2 ರಿಂದ ಮೇಲ್ಪಟ್ಟ ವಯೋಮಾನದವರಿಗೆ ಲಸಿಕೆಯ ಮಾರುಕಟ್ಟೆ ಅನುಮತಿ ನೀಡಲು ಸಮಿತಿಯು ಶಿಫಾರಸು ಮಾಡಿದೆ ಎಂದು ವರದಿಯಾಗಿತ್ತು.
ಆದಾಗ್ಯೂ, ತುರ್ತು ಬಳಕೆಯ ಅಧಿಕಾರವು ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಕೋವಾಕ್ಸಿನ್‌ನ ಡೆವಲಪರ್ ಹೋಲ್ ವೈರಿಯನ್, ನಿಷ್ಕ್ರಿಯಗೊಳಿಸಿದ ಕೊರೊನಾ ವೈರಸ್ ಲಸಿಕೆಯ ಅನುಮೋದಿತ ಕ್ಲಿನಿಕಲ್ ಟ್ರಯಲ್ ಪ್ರೋಟೋಕಾಲ್ ಪ್ರಕಾರ ಅಧ್ಯಯನವನ್ನು ಮುಂದುವರಿಸುತ್ತಾರೆ ಎಂದು ಹೇಳಲಾಗಿತ್ತು.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

2 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement