ಹಾನಗಲ್ ಉಪ ಚುನಾವಣೆ; ಬಿಜೆಪಿ ಬಂಡಾಯ ಅಭ್ಯರ್ಥಿ ನಿರ್ಧಾರ ಬುಧವಾರ ಪ್ರಕಟ..?

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಬಿಜೆಪಿ ಮುಖಂಡ ಆರ್. ಸಿ. ಬಳ್ಳಾರಿ ನಾಮಪತ್ರ ವಾಪಸ್ ಪಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ದಾವಣಗೆರೆ ಜಿಎಂಐಟಿಯಲ್ಲಿ ಗುಪ್ತ ಸಭೆ ನಡೆದಿದೆ. ಆದರೂ ಇನ್ನೂ ಬಳ್ಳಾರಿ ಅವರು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯ ಜಿಎಂಐಟಿಯಲ್ಲಿ ಆರ್. ಸಿ. ಬಳ್ಳಾರಿ ಜೊತೆ ಮಾತುಕತೆ ನಡೆಸಿದ ನಂತರ ಬುಧವಾರ ಸಮಾಜದ ಮುಖಂಡರ ಸಭೆಯನ್ನು ಹಾನಗಲ್‌ನಲ್ಲಿ ಕರೆದಿದ್ದು, ಅಲ್ಲಿ ಸ್ಪಷ್ಟ ನಿರ್ಧಾರ ಪ್ರಕಟಿಸುವುದಾಗಿ ಹೇಳುವ ಮೂಲಕ ಅವರ ನಡೆ ಇನ್ನೂ ನಿಗೂಢವಾಗಿದೆ.
ಜಿಎಂಐಟಿಯಲ್ಲಿ ಬಸವರಾಜ ಬೊಮ್ಮಾಯಿ ಆರ್. ಸಿ. ಬಳ್ಳಾರಿ ಮನವೊಲಿಸಲು ಪ್ರಯತ್ನಿಸಿದ್ದಾರೆ. ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನೀವು ಕಣಕ್ಕಿಳಿದರೆ ನಮಗೆ ಕಷ್ಟವಾಗುತ್ತದೆ. ನಾನು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಆಗಿರುವುದರಿಂದ ಸಹಕರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಆರ್. ಸಿ. ಬಳ್ಳಾರಿ ಈ ಬಗ್ಗೆ ಬುಧವಾರ ಅಥವಾ ಗುರುವಾರ ಸ್ಪಷ್ಟ ನಿರ್ಧಾರಬರುವ ಸಾಧಯತೆ ಇದೆ ಎನ್ನಲಾಗಿದೆ. ಏನಿದ್ದರೂ ಸಮಾಜದ ಮುಖಂಡರು ಹಾಗೂ ಬೆಂಬಲಿಗರ ಜೊತೆ ಚರ್ಚಿಸಿದ ಬಳಿಕವೇ ತಮ್ಮ ನಾಮಪತ್ರಗಳನ್ನು ವಾಪಸ್ ಪಡೆಯುವ ಬಗ್ಗೆ ಹೇಳುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬುಧವಾರ ನಾಮಪತ್ರ ಪಡೆಯುಲು ಕೊನೆಯ ದಿನವಾಗಿದೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement