ಹಾನಗಲ್ ಉಪ ಚುನಾವಣೆ; ಬಿಜೆಪಿ ಬಂಡಾಯ ಅಭ್ಯರ್ಥಿ ನಿರ್ಧಾರ ಬುಧವಾರ ಪ್ರಕಟ..?

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಬಿಜೆಪಿ ಮುಖಂಡ ಆರ್. ಸಿ. ಬಳ್ಳಾರಿ ನಾಮಪತ್ರ ವಾಪಸ್ ಪಡೆಯುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ದಾವಣಗೆರೆ ಜಿಎಂಐಟಿಯಲ್ಲಿ ಗುಪ್ತ ಸಭೆ ನಡೆದಿದೆ. ಆದರೂ ಇನ್ನೂ ಬಳ್ಳಾರಿ ಅವರು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆಯ … Continued

ಸರ್ಕಾರದಿಂದ ಮುಜರಾಯಿ ಇಲಾಖೆ ದೇವಾಲಯಗಳ ಅರ್ಚಕರು-ಸಿಬ್ಬಂದಿಗೆ ದಸರಾ ಬಂಪರ್‌ ಗಿಫ್ಟ್‌.! 6ನೇ ವೇತನ ಶ್ರೇಣಿ ಜಾರಿಗೆ ನಿರ್ಧಾರ

ಬೆಂಗಳೂರು: ಮುಜರಾಯಿ ಇಲಾಖೆ ದೇವಾಲಯಗಳ  ಅರ್ಚಕರು ಮತ್ತು ಸಿಬ್ಬಂದಿಗೆ ರಾಜ್ಯ ಸರ್ಕಾರ ಭರ್ಜರಿ ದಸರಾ ಗಿಫ್ಟ್ ನೀಡಿದೆ,ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಸರಾ ಹಬ್ಬದ ನಿಮಿತ್ತ ಮೂರು ನಾಲ್ಕು ಯೋಜನೆ ಜಾರಿ ಮಾಡಲಿದ್ದೇವೆ … Continued

2ರಿಂದ 18 ವರ್ಷದ ಮಕ್ಕಳಿಗೆ ಕೋವಾಕ್ಸಿನ್ ತುರ್ತು ಬಳಕೆಗೆ ಇನ್ನೂ ಅನುಮತಿ ನೀಡಿಲ್ಲ:ಡಾ. ಭಾರತಿ ಪವಾರ್

ನವದೆಹಲಿ: ಕೋವಿಡ್ -19 ರ ವಿಷಯ ತಜ್ಞರ ಸಮಿತಿಯು 2-18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅನುಮೋದನೆ ನೀಡಿದೆ ಎಂದು ವರದಿಗಳು ತಿಳಿಸಿತ್ತು. ಆದರೆ ಕೋವಾಕ್ಸಿನ್ ಕೋವಿಡ್-19 ಲಸಿಕೆ 2-18 ವರ್ಷ ವಯಸ್ಸಿನವರಿಗೆ ತುರ್ತು ಬಳಕೆಗಾಗಿ ಡಿಜಿಸಿಐ ಇನ್ನೂ ಅನುಮೋದನೆ ನೀಡಿಲ್ಲ. ಇನ್ನೂ ಅದರ ಮೌಲ್ಯಮಾಪನ ನಡೆಯುತ್ತಿದೆ ಎಂದು ಕೇಂದ್ರ … Continued

ಮೈಸೂರು: ಮಳೆಗೆ ಎರಡಂತಸ್ತಿನ ಕಟ್ಟಡ ಕುಸಿತ, ವೃದ್ಧೆಯರಿಬ್ಬರು ಪಾರು

ಮೈಸೂರು: ಬೆಂಗಳೂರಿನಲ್ಲಿ ಕೆಲದಿನಗಳ ಹಿಂದೆಯಷ್ಟೇ ಬಹುಮಹಡಿ ಕಟ್ಟಡ ಕುಸಿತದ ಘಟನೆ ನೆನಪಿರುವಾಗಲೇ ಭಾರೀ ಮಳೆಗೆ ಮೈಸೂರಿನಲ್ಲೂ ಎರಡಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸೋಮವಾರವೂ ನಗರದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇಟ್ಟಿಗೆಗೂಡಿನಲ್ಲಿರುವ ಎರಡಂತಸ್ತಿನ ಕಟ್ಟಡವೊಂದು ಭಾಗಶಃ ಕುಸಿದು ಬಿದ್ದಿದೆ. 60 ಹಾಗೂ 65 ವರ್ಷದ ಇಬ್ಬರು ವೃದ್ಧೆಯರು ಮನೆಯಲ್ಲಿದ್ದರೂ ಅಪಾಯದಿಂದ … Continued

ದೆಹಲಿಯಲ್ಲಿ ಪಾಕ್ ಉಗ್ರನ ಬಂಧನ, ಭಯೋತ್ಪಾದಕ ದಾಳಿ ವಿಫಲಗೊಳಿಸಿದ ದೆಹಲಿ ಪೊಲೀಸರು: ಎಕೆ-47, ಹ್ಯಾಂಡ್ ಗ್ರೆನೇಡ್ ವಶಕ್ಕೆ

ನವದೆಹಲಿ: ನವರಾತ್ರಿಯಲ್ಲಿ ದೆಹಲಿಯಲ್ಲಿ ಭೀಕರ ಭಯೋತ್ಪಾದಕ ದಾಳಿ ಮಾಡಲು ಸಂಚು ರೂಪಿಸಿದ್ದ ಪಾಕಿಸ್ತಾನಿ ಮೂಲದ ಭಯೋತ್ಪಾದಕನನ್ನು ದೆಹಲಿ ಪೊಲೀಸರ ವಿಶೇಷ ವಿಭಾಗವು ಮಂಗಳವಾರ ನಗರದಲ್ಲಿ ಬಂಧಿಸಿತು. ಭಯೋತ್ಪಾದಕ ಮೊಹಮ್ಮದ್ ಅಶ್ರಫ್ ಪಾಕಿಸ್ತಾನದ ಪಂಜಾಬ್ ನಿವಾಸಿಯಾಗಿದ್ದು, ಆತನನ್ನು ಪೂರ್ವ ದೆಹಲಿಯ ಲಕ್ಷ್ಮಿ ನಗರದ ರಮೇಶ್ ಪಾರ್ಕ್ ನಿಂದ ಬಂಧಿಸಲಾಯಿತು. ಆತನ ಬಳಿಯಿಂದ ಎಕೆ -47 ಅಸ್ಸಾಲ್ಟ್ ರೈಫಲ್, … Continued

ಅಕ್ಟೋಬರ್‌ 16ರ ವರೆಗೆ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರ ವರೆಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, … Continued

ಮೈಸೂರು ಬಾಂಬ್ ಸ್ಫೋಟ ಪ್ರಕರಣ: ಮೂವರು ಉಗ್ರರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: 2016ರಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಅಪರಾಧಿಗಳಾಗಿ ತೀರ್ಮಾನಿಸಲ್ಪಟಿರುವ ತಮಿಳುನಾಡು ಮೂಲದ ಇಬ್ಬರು ಉಗ್ರರಿಗೆ ದಂಡ ಸಹಿತ 10 ವರ್ಷ ಜೈಲು ಶಿಕ್ಷೆ ಹಾಗೂ ಮತ್ತೊಬ್ಬ ಉಗ್ರನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕಸನಪ್ಪ ನಾಯಕ್ ಅವರು, … Continued

ಭಾರತದಲ್ಲಿ 14,313 ಹೊಸ ಕೋವಿಡ್ ಪ್ರಕರಣಗಳು ದಾಖಲು, 7 ತಿಂಗಳ ನಂತರ ದೈನಂದಿನ ಪ್ರಕರಣಗಳಲ್ಲಿ ಭಾರೀ ಇಳಿಕೆ

ನವದೆಹಲಿ: ಭಾರತವು ಕಳೆದ 24 ಗಂಟೆಗಳಲ್ಲಿ ಒಟ್ಟು 14,313 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ 181 ಸಾವುಗಳು ದಾಖಲಾಗಿವೆ, ಇದರಿಂದಾಗಿ ಸಾವಿನ ಸಂಖ್ಯೆ 4,50,963 ಕ್ಕೆ ತಲುಪಿದೆ. ಇದರೊಂದಿಗೆ, ಸಕ್ರಿಯ ಕೋವಿಡ್ -19 ಪ್ರಕರಣಗಳು ಈಗ 2,14,900 … Continued

ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗಿನ ರಾತ್ರಿಯ ಎನ್ಕೌಂಟರ್‌ನಲ್ಲಿ ಸ್ಥಳೀಯರಲ್ಲದ ಬೀದಿ ವ್ಯಾಪಾರಿ ಹತ್ಯೆಯಲ್ಲಿ ಭಾಗಿಯಾದ ಒಬ್ಬ ಸೇರಿದಂತೆ ದಿ ರೆಸಿಸ್ಟೆನ್ಸ್ ಫ್ರಂಟ್‌ನ (ಟಿಆರ್‌ಎಫ್) ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಸೋಮವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ನ ತುಲ್ರಾನ್, ಇಮಾಮ್ಸಹಾಬ್ ಪ್ರದೇಶದಲ್ಲಿ ಉಗ್ರರು … Continued

ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ಮಂಗಳೂರಿನಲ್ಲಿ ಬೆಂಗಳೂರಿನ ನಾಲ್ವರು ಮಕ್ಕಳು ಪತ್ತೆ

ಮಂಗಳೂರು: ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಕೊನೆಗೂ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಂಗಳೂರಲ್ಲಿ ಪತ್ತೆಯಾಗಿದ್ದಾರೆ. ಈಗ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸೋಲದೇವನಹಳ್ಳಿ ಕ್ರಿಟನ್ ಕುಶಾಲ್ ಅಪಾರ್ಟ್‌ಮೆಂಟಿನಿಂದ ನಾಪತ್ತೆಯಾಗಿದ್ದ ಮಕ್ಕಳು ಮನೆಯಿಂದ ಹೋಗುವಾಗ ಚಿನ್ನದ ನೆಕ್ಲೆಸ್, ಹಣ ತೆಗೆದುಕೊಂಡು ಹೋಗಿದ್ದರು. ಹೀಗಾಗಿ ಮಕ್ಕಳ … Continued