ಕಾಶ್ಮೀರ: ಪುಲ್ವಾಮ ಎನ್ಕೌಂಟರ್, ಜೈಶ್ ಉನ್ನತ ಕಮಾಂಡರ್ ಶಾಮ್ ಸೋಫಿ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರನನ್ನು ಸೇನಾಪಡೆಗಳು ಹೊಡೆದುರುಳಿಸಿವೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಜೈಶ್ ಇ ಮೊಹಮ್ಮದ್ ಭಯೋತ್ಪಾದನೆ ಸಂಘಟನೆಯ ಟಾಪ್ ಕಮಾಂಡರ್ ಶಾಮ್ ಸೋಫಿ ಎಂಬ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಾಲ್ ಪ್ರದೇಶದ ತಿಲ್ವಾನಿ ಮೊಹಲ್ಲಾದಲ್ಲಿಉಗ್ರರ ಉಪಸ್ಥಿತಿ ಬಗ್ಗೆ ಖಚಿತ ಮಾಹಿತಿ ತಿಳಿದ ಬಳಿಕ ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ ನಂತರ ನಡೆದ ಎನ್‌ಕೌಂಟರ್‌ನಲ್ಲಿ ಆತನನ್ನು ಕೊಂದು ಹಾಕಿದೆ. ‘ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಕಾರ್ಯಾಚರಣೆ ಮುಂದುವರೆದಿದ್ದು, ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಇದೆ ಎಂದು ಸೇನಾಪಡೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅವರನ್ನೇ ಕೊಂದಿದ್ದ ಉಗ್ರ
ಇಂದು ಸೇನಾಪಡೆಗಳಿಂದ ಹತನಾದ ಉಗ್ರ ಶಾಮ್ ಸೋಫಿ ಈ ಹಿಂದೆ ಕಾಶ್ಮೀರದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹತ್ಯೆಯಲ್ಲೂ ಪಾಲ್ಗೊಂಡಿದ್ದ ಎನ್ನಲಾಗಿದೆ. ಈ ಸಂಬಂಧ ಆತನ ವಿರುದ್ಧ ದೂರು ಕೂಡ ದಾಖಲಾಗಿತ್ತು.
ಇದಕ್ಕೂ ಮೊದಲು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಹತರಾದ ಒಂದು ದಿನದ ನಂತರ ಟ್ರಾಲ್ ನಲ್ಲಿ ಈ ಗುಂಡಿನ ಚಕಮಕಿ ನಡೆದಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ