ಯಲ್ಲಾಪುರ: ಕೆಮಿಕಲ್ ಟ್ಯಾಂಕರ್ ಸ್ಫೋಟ : 300-400 ಮೀಟರ್ ವ್ಯಾಪಿಸಿರುವ ಬೆಂಕಿ

posted in: ರಾಜ್ಯ | 0

ಕಾರವಾರ: ಇಂದು, ಬುಧವಾರ (ಅಕ್ಟೋಬರ್ 13) ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟಗೊಂಡಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸಾಕಷ್ಟು ದೂರದ ವರೆಗೆ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಸ್ಫೋಟದಿಂದ 300 ರಿಂದ 400 ಮೀಟರ್ ದೂರಗಳಷ್ಟು ದೂರದ ವರೆಗೆ ಏನಾಗಿದೆ ಅಧಿಕಾರಿಗಳು ನೋಡುತ್ತಿದ್ದಾರೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ