ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಆರೋಪದ ವಿಡಿಯೊ ಲೀಕ್‌: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಹಾಗೂ ಮಾಜಿ ಸಂಸದ ಉಗ್ರಪ್ಪ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.
ಕಾಂಗ್ರೆಸ್‌ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್‌ ಖಾನ್‌ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ ಈ ವಿಷಯ ತಿಳಿಸಿದ್ದಾರೆ.
ಶಿಸ್ತುಪಾಲನಾ ಸಮಿತಿ ತುರ್ತು ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಅವರ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಲೀಂ ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳವರೆಗೆ ಉಚ್ಚಾಟಿಸಲಾಗಿದೆ ಎಂದು ತಿಳಿಸಲಾಗಿದೆ.
ಉಗ್ರಪ್ಪಗೆ ನೋಟಿಸ್‌:
ಡಿ.ಕೆ. ಶಿವಕುಮಾರ್‌ ಅವರ ಘನತೆ ಗೌರವವಗಳಿಗೆ ಕುಂದುಂಟುವಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವ ವಿಚಾರಗಳನ್ನು ಮಾತನಾಡಿದ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗೆ ಕಾರಣ ಕೇಳಿ ನೋಟಿಸ್ ಜಾರಿ ಆಗಿದೆ. ವಿ.ಎಸ್​. ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ರಿಂದ ನೋಟಿಸ್​ ಜಾರಿ ಮಾಡಲಾಗಿದೆ. ಈ ನಡವಳಿಕೆಯ ಬಗ್ಗೆ ತಕ್ಷಣ ವೇ ಮೂರು ದಿನದ ಒಳಗಡೆ ಉತ್ತರ ನೀಡಬೇಕು ಎಂದು ಉಗ್ರಪ್ಪ ಅವರಿಗೆ ನೋಟಿಸಿನಲ್ಲಿ ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement