ಆರ್ಯನ್​ ಖಾನ್​ಗೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ರೇವ್ಸ್​ ಪಾರ್ಟಿ ಮಾಡಿ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿ ಕುರಿತು ಇಂದು (ಬುಧವಾರ) ವಿಚಾರಣೆ ನಡೆಸಿದ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯಬೇಕಿದೆ.
ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಎನ್​ಸಿಬಿ ವಿರೋಧ ಮಾಡಿತ್ತು. ಹೀಗಾಗಿಯೇ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನಿರಾಕರಿಸಿದೆ.
‘ಆರ್ಯನ್ ಖಾನ್​ಗೆ ಯಾರು ಆಹ್ವಾನ ನೀಡಿದ್ದರೋ ಅವರನ್ನು ಬಂಧಿಸಿಲ್ಲ. ಪ್ರತೀಕ್ ಗಾಬಾ ಎಂಬಾತ ಆರ್ಯನ್ ಖಾನ್ ಅವರನ್ನು ಪಾರ್ಟಿಗೆ ಆಹ್ವಾನಿಸಿದ್ದ. ಆತನನ್ನು ಬಂಧಿಸಬೇಕಿತ್ತು. ಎನ್‌ಡಿಪಿಎಸ್ ಕಾಯಿದೆಯ 27 ಎ ಸೆಕ್ಷ್​ ಕಳ್ಳಸಾಗಣಿಕೆಗೆ ಸಂಬಂಧಿಸಿದೆ. ಈ ಸೆಕ್ಷನ್ ಆರ್ಯನ್ ಖಾನ್‌ಗೆ ಅನ್ವಯಿಸುವುದಿಲ್ಲ. ಆರ್ಯನ್​ ಯಾವುದೇ ಅಕ್ರಮ ಕಳ್ಳಸಾಗಣೆಯಲ್ಲಿ ಭಾಗಿಯಾಗಿಲ್ಲ. ಈ ಸೆಕ್ಷನ್ ವಿಧಿಸಿರುವುದು ಅಸಂಬದ್ಧ ಎಂದು ಆರ್ಯನ್ ಖಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡಿಸಿದರು.
ಇವರು ಡ್ರಗ್ಸ್ ಪೆಡ್ಲರ್​​ಗಳು ಅಲ್ಲ. ಡ್ರಗ್ಸ್ ಕಳ್ಳ ಸಾಗಾಟವನ್ನು ಮಾಡಿಲ್ಲ. ಇವರೆಲ್ಲಾ ಚಿಕ್ಕ ಮಕ್ಕಳು. ಅವರು ಪಾಠವನ್ನು ಕಲಿತಿದ್ದಾರೆ. ಜೈಲಿನಲ್ಲಿ ದೀರ್ಘ ಅವಧಿಯವರೆಗೂ ಇರುವುದು ಬೇಡ. ಆರ್ಯನ್ ಖಾನ್​ಗೆ ಜಾಮೀನು ನೀಡಿ’ ಎಂದು ಅಮಿತ್ ದೇಸಾಯಿ ಕೋರ್ಟ್​ಗೆ ಮನವಿ ಮಾಡಿದರು.
ಎನ್​ಸಿಬಿ ಪರ ವಕೀಲರಾದ ಅನಿಲ್​​ ಸಿಂಗ್ ವಾದಮಂಡಿಸಿ ಡ್ರಗ್ಸ್ ಕಳ್ಳ ಸಾಗಣೆ ಬಹಳ‌‌ ಗಂಭೀರ ವಿಷಯ. ರೇವ್ ಪಾರ್ಟಿಗಳಲ್ಲಿ ಯುವಕರು ಡ್ರಗ್ಸ್ ಸೇವನೆ ಮಾಡುತ್ತಾರೆ. ಇದರಿಂದ ಸಮಾಜಕ್ಕೆ ತೊಂದರೆ ಆಗುತ್ತದೆ. ಇದು ಒಂದಿಬ್ಬರ ಡ್ರಗ್ಸ್ ಸೇವನೆಗೆ ಸಂಬಂಧಪಟ್ಟಿದ್ದಲ್ಲ. ನಾವು ಇಡೀ ಜಾಲದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆರ್ಯನ್ ಖಾನ್​​​ನನ್ನು‌ ಪಾರ್ಟಿಗೆ ಆಹ್ವಾನಿಸಲಾಗಿತ್ತು. ಯಾರು, ಯಾವಾಗ ಆಹ್ವಾನಿಸಿದರು ಎಂದು ಹೇಳುತ್ತಿಲ್ಲ. ಅವರಿಗೆ ಜಾಮೀನು ನೀಡಬಾರದು’ ಎಂದು ವಾದಿಸಿದರು. ನಂತರ ನ್ಯಾಯಾಲಯವು ವಿಚಾರಣೆಯನ್ನು ನಾಳೆಗೆ (ಗುರುವಾರಕ್ಕೆ) ಮುಂದೂಡಿತು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement