ಉಪಚುನಾವಣೆ: ನಾಮಪತ್ರ ಹಿಂಪಡೆದ ಹಾನಗಲ್ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ

ಹಾವೇರಿ: ಜಿಲ್ಲೆಯ ಹಾನಗಲ್ ಉಪಚುನಾವಣೆಯ ಬಿಜೆಪಿ ಬಂಡಾಯ ಅಭ್ಯರ್ಥಿ ಸಿ.ಆರ್.ಬಳ್ಳಾರಿ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ.
ಹಾನಗಲ್‌ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಆರ್.ಬಳ್ಳಾರಿಗೆ ಟಿಕೆಟ್ ಲಭಿಸಿರಲಿಲ್ಲ. ಹೀಗಾಗಿ, ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈಗ ಅವರು ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಇಂದು (ಬುಧವಾರ) ನಾಮಪತ್ರ ಹಿಂಪಡೆದಿದ್ದಾರೆ.
ಸಚಿವ ಮುರುಗೇಶ ನಿರಾಣಿಯವರ ಕಾರಿನಲ್ಲಿ ತಹಶೀಲ್ದಾರ ಕಚೇರಿಗೆ ಬಂದು ಸಿ.ಆರ್. ಬಳ್ಳಾರಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಿ.ಆರ್.ಬಳ್ಳಾರಿ ಚರ್ಚೆ ನಡೆಸಿದ್ದರು. ಈಗ ನಾಮಪತ್ರ ವಾಪಸ್ ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು :

ನಿಯಾಜ್ ಶೇಖ್ (ಜೆಡಿಎಸ್), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ನಜೀರ ಅಹ್ಮದ ಸವಣೂರ (ಪಕ್ಷೇತರ), ಪರಶುರಾಮ ಹೊಂಗಲ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್.ಎಸ್.ದೊಡ್ಡಲಿಂಗಣ್ಣನವರ (ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ(ಪಕ್ಷೇತರ) ಅವರು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಪ್ರಮುಖ ಸುದ್ದಿ :-   ನಾಮಪತ್ರ ವಾಪಸ್ ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಸಿಂದಗಿ: ನಾಮಪತ್ರ ಹಿಂಪಡೆದ ಇಬ್ಬರು ಅಭ್ಯರ್ಥಿಗಳು
ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ವಿಕ್ರಮ ಪಂಡಿತ, ಪಕ್ಷೇತರ ಅಭ್ಯರ್ಥಿ ಅಬ್ದುಲ್ ರೆಹಮಾನ್ ದುಂಡಸಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು ಉಳಿದಿದ್ದಾರೆ. ಕಾಂಗ್ರೆಸ್​ನಿಂದ ಅಶೋಕ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್​ ಪಕ್ಷದಿಂದ ನಾಜಿಯಾ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement