ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ.
ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್​ ಮುಖಂಡರಾದ ಸಲೀಂ ಮತ್ತು ಉಗ್ರಪ್ಪ ಅವರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಡಿ.ಕೆ. ಶಿವಕುಮಾರ್​ ಬೆಂಬಲಿಗರು ಒತ್ತಾಯ ಮಾಡುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ. ಶಿವಕುಮಾರ್‌ರದ್ದು ದೊಡ್ಡ ಸ್ಕ್ಯಾಮ್. ಪಟ್ಟು ಹಿಡಿದು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸಿದ್ದು ನಾವು ಎಂದು ಹೇಳಿರುವ ಸಲೀಂ- ಉಗ್ರಪ್ಪ ನಡುವಣ ಮಾತುಗಳು ಬಹಿರಂಗವಾಗಿವೆ. ಕರ್ನಾಟಕ ರಾಜಕೀಯದಲ್ಲಿ ಭ್ರಷ್ಟಾಚಾರ ಎಂಬುದು ಅವ್ಯಾಹತವಾಗಿ ನಡೆದು ಬಂದಿದೆ. ಇದು ಆಡಳಿತಾರೂಢ ಮತ್ತು ವಿಪಕ್ಷಗಳು ಎಂಬ ಬೇಧ ಭಾವ ಇಲ್ಲದೆ ನಡೆದಿದೆ. ಈ ಹಿನ್ನೆಲೆಯಲ್ಲಿ ಸಹಜವಾಗಿಯೇ ಸಲೀಂ-ಉಗ್ರಪ್ಪ ನಡುವಣ ಮಾತುಗಳು ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಪಕ್ಷ ಉಗ್ರವಾಗಿ ಟ್ವೀಟ್​ ಮಾಡಿ, ಕಾಂಗ್ರೆಸ್‌ ಅನ್ನು ಕೆಣಕಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement