ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಇಲ್ಲ: ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ವಿದ್ಯುತ್ ಉತ್ಪಾದನೆಗೆ ಬೇಕಾದ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ 20 ಲಕ್ಷ ಟನ್ ಕಲ್ಲಿದ್ದಲಿಗೆ ಬೇಡಿಕೆಯಿದೆ. ಇಂಧನ ಇಲಾಖೆಯ ಬೇಡಿಕೆಯಂತೆ ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಮೊದಲು 19 ಲಕ್ಷ ಟನ್‌ ಕಲ್ಲಿದ್ದಲಿಗೆ ಬೇಡಿಕೆ ಇತ್ತು. ಈಗ 1 ಲಕ್ಷ ಟನ್ ಹೆಚ್ಚುವರಿ ಬೇಡಿಕೆ ಬಂದಿದೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಛತ್ತೀಸಗಡದ ದೀಪ್ಕಾ ಕಲ್ಲಿದ್ದಲು ಗಣಿಗೆ ಬುಧವಾರ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕಲ್ಲಿದ್ದಲು ಉತ್ಪಾದನೆಯ ಪ್ರಮಾಣ ಹೆಚ್ಚಿಸಬೇಕು ಎಂದು ತಾಕೀತು ಮಾಡಿದರು.
ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ನೀಡಿರುವ ಸಚಿವರು, ‘ಭಾರತದ ಅತಿದೊಡ್ಡ ಕಲ್ಲಿದ್ದಲು ಗಣಿಯಾದ ದಿಪ್ಕಾಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಛತ್ತೀಸಗಡದ ಕೊಬ್ರಾ ಜಿಲ್ಲೆಯಲ್ಲಿರುವ ಈ ಗಣಿಯು ವರ್ಷಕ್ಕೆ 35 ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯ ಸಾಮರ್ಥ್ಯ ಹೊಂದಿದೆ’ ಎಂದು ಹೇಳಿದ್ದಾರೆ. ರಾಂಚಿ ಸುತ್ತಮುತ್ತ ಇರುವ ಹಲವು ಗಣಿಗಳಿಗೂ ಜೋಶಿ ಗುರುವಾರ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಕೇರಳ, ಪಂಜಾಬ್, ಮತ್ತು ದೆಹಲಿ ಸೇರಿದಂತೆ ಹಲವು ರಾಜ್ಯಗಳಿಂದ ಕಲ್ಲಿದ್ದಲು ಕೊರತೆಯ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸಚಿವರು ಸ್ವತಃ ಗಣಿಗಳಿಗೆ ಭೇಟಿ ನೀಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement