ಇನ್ಫೋಸಿಸ್​ಗೆ ಎರಡನೇ ತ್ರೈಮಾಸಿಕದಲ್ಲಿ 5421 ಕೋಟಿ ರೂ. ಲಾಭ; 15 ರೂ.ಗಳ ಡಿವಿಡೆಂಡ್ ಘೋಷಣೆ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಐ.ಟಿ. (ಮಾಹಿತಿ ತಂತ್ರಜ್ಞಾನ) ಸೇವಾ ಕಂಪೆನಿಯಾದ ಇನ್ಫೋಸಿಸ್ 2021ರ ಜುಲೈನಿಂದ ಸೆಪ್ಟೆಂಬರ್​ ತನಕದ ತ್ರೈಮಾಸಿಕ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, 5,421 ಕೋಟಿ ರೂ.ಗಳ ಕ್ರೋಡೀಕೃತ ಲಾಭವನ್ನು ವರದಿ ಮಾಡಿದೆ. ಜೂನ್ ತ್ರೈಮಾಸಿಕದಲ್ಲಿ ಬಂದಿದ್ದ 5,195 ಕೋಟಿ ರೂ.ಗಳ ನಿವ್ವಳ ಲಾಭಕ್ಕೆ ಹೋಲಿಸಿದರೆ ಶೇ 4.4ರಷ್ಟು ಹೆಚ್ಚಳವಾಗಿದೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ … Continued

ಆರ್ಯನ್​ ಖಾನ್​ಗೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮುಂಬೈ: ರೇವ್ಸ್​ ಪಾರ್ಟಿ ಮಾಡಿ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಆರ್ಯನ್‌ ಖಾನ್ ಜಾಮೀನು ಅರ್ಜಿ ಕುರಿತು ಇಂದು (ಬುಧವಾರ) ವಿಚಾರಣೆ ನಡೆಸಿದ ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯಬೇಕಿದೆ. ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ … Continued

ಹೇಳಿಕೆಯನ್ನು ಮಾಧ್ಯಮದಲ್ಲಿ ತಪ್ಪಾಗಿ ಬಿಂಬಿಸಲಾಗಿದೆ: ಉಗ್ರಪ್ಪ

ಬೆಂಗಳೂರು: ಬಿಜೆಪಿಯವರು ಮಾಡಿದ ಭ್ರಷ್ಟಾಚಾರವನ್ನು ಕಾಂಗ್ರೆಸ್ ಪಕ್ಷದವರ ತಲೆಗೆ ಕಟ್ಟಲು ಪ್ರಯತ್ನಿಸಲಾಗುತ್ತಿದೆ ಎಂದು ಪಿಸುಗುಟ್ಟಿದ್ದನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಿನ್ನೆ ವರದಿಯಾದ ವಿವಾದ ಕುರಿತು ಇಂದು (ಬುಧವಾರ) ತುರ್ತು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ನಿನ್ನೆ ಪತ್ರಿಕಾಗೋಷ್ಠಿ ಆರಂಭಿಸುವ ಮುನ್ನ ಮಾಧ್ಯಮ ವಿಭಾಗದ ಸಂಚಾಲಕರಾಗಿದ್ದ ಸಲೀಂ ಹೇಳಿದ್ದು ಮಾಧ್ಯಮದಲ್ಲಿ ಪ್ರಸಾರವಾಗಿತ್ತು. … Continued

ನವರಾತ್ರಿಯ ಸಮಯದಲ್ಲಿ ಒಡಿಶಾದಲ್ಲಿ 2 ತಲೆ, 3 ಕಣ್ಣುಗಳುಳ್ಳ ಕರುವಿನ ಜನನ, ದುರ್ಗಾ ಅವತಾರ ಎಂದು ಪೂಜೆ, ವೀಕ್ಷಿಸಿ

ನಬರಂಗಪುರ್ (ಒಡಿಶಾ): ನವರಾತ್ರಿಯ ಹಬ್ಬದಲ್ಲಿ ಒರಿಸ್ಸಾದ ನಬರಂಗಪುರ್ ಜಿಲ್ಲೆಯಲ್ಲಿ ಎರಡು ತಲೆ ಮತ್ತು ಮೂರು ಕಣ್ಣುಗಳೊಂದಿಗೆ ಆಕಳ ಕರು ಜನಿಸಿದೆ. ಈಗ ಆ ಕರುವನ್ನು ದುರ್ಗಾದೇವಿಯ ಅವತಾರವೆಂದು ಪೂಜಿಸಲಾಗುತ್ತದೆ. ನಬರಂಪುರ ಜಿಲ್ಲೆಯ ಕುಮುಲಿ ಪಂಚಾಯತ್‌ನ ಬಿಜಾಪುರ ಗ್ರಾಮದ ಧನಿರಾಮ್ ಎಂಬ ರೈತನ ಮನೆಯ ಹಸು ಎರಡು ತಲೆ ಮತ್ತು ಮೂರು ಕಣ್ಣುಗಗಳುಳ್ಳ ಕರು ಜನಿಸಿದೆ. ಧನಿರಾಮ್ … Continued

ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಆರೋಪದ ವಿಡಿಯೊ ಲೀಕ್‌: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಹಾಗೂ ಮಾಜಿ ಸಂಸದ ಉಗ್ರಪ್ಪ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ. ಕಾಂಗ್ರೆಸ್‌ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ರೆಹಮಾನ್‌ ಖಾನ್‌ ಅವರು ಈ ಕುರಿತು ಪತ್ರಿಕಾ … Continued

ಸಲೀಂ-ಉಗ್ರಪ್ಪ ನಡುವಿನ ಸಂಭಾಷಣೆಗೂ ನನಗೂ ಸಂಬಂಧವಿಲ್ಲ, ಪರ್ಸೆಂಟೇಜ್ ವ್ಯವಹಾರದ ಅಗತ್ಯವೂ ನನಗಿಲ್ಲ ಶಿಸ್ತುಪಾಲನಾ ಸಮಿತಿ ತೀರ್ಮಾನಕ್ಕೆ ಬದ್ಧ: ಡಿಕೆಶಿ

ಬೆಂಗಳೂರು: ಸಲೀಂ ಮತ್ತು ವಿ. ಎಸ್. ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲೀಂ ಹಾಗೂ ಉಗ್ರಪ್ಪನವರ ಸಂಭಾಷಣೆಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿರುವುದು ಪಕ್ಷಕ್ಕೆ ಮತ್ತು ನನಗೆ ಖಂಡಿತಾ ಮುಜುಗರವಾಗಿದೆ. ಅದಕ್ಕೇ ಇವತ್ತು … Continued

ಹಾವಿನಿಂದ ಕಚ್ಚಿಸಿ ಹೆಂಡತಿ ಕೊಲೆ ಪ್ರಕರಣ; ಅಪರಾಧಿ​ಗೆ ಎರಡು ಜೀವಾವಧಿ ಶಿಕ್ಷೆ ಪ್ರಕಟ..!

ತಿರುವನಂತಪುರಂ: ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ತೀರ್ಪು ಇದೀಗ ಹೊರಬಿದ್ದಿದ್ದು, ಆರೋಪಿ ಸೂರಜ್ ಕುಮಾರ್​ಗೆ ಎರಡು ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಗಿದೆ. ಹಾಗೇ 5 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೇರಳದ ಕೊಲ್ಲಂನ ಅಡಿಷನಲ್ ಸೆಷನ್ಸ್ ಕೋರ್ಟ್ ಇಂದು (ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಷದ ಹಾವಿನಿಂದ ಕಚ್ಚಿಸಿ ಪತ್ನಿ ಉತ್ರಾಳನ್ನು ಕೊಂದಿದ್ದ ಗಂಡ … Continued

ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಸಲೀಂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಔಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು … Continued

ಧಾರವಾಡ: ಜೆ.ಎಸ್.ಎಸ್ ಶಿಕ್ಷಕಿಯರಿಗೆ ಸುವರ್ಣ ಪದಕ

ಧಾರವಾಡ: ಧಾರವಾಡದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳ ಶಿಕ್ಷಕಿಯರು ಕರ್ನಾಟಕ ವಿಶ್ವವಿದ್ಯಾಲಯದಿಂದ ಸುವರ್ಣ ಪದಕ ಪಡೆದಿದ್ದಾರೆ. ಹುಬ್ಬಳ್ಳಿಯ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕಿ ಸುನಂದಾ ಸಪೂರಿ ಅವರಿಗೆ ಎಂ.ಎಸ್ ಸ್ನಾತಕೋತ್ತರ ಪದವಿಯಲ್ಲಿ ಸುವರ್ಣ ಪದಕ ದೊರೆತಿದೆ. ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಗ್ರಂಥಪಾಲಕಿಯಾಗಿ ಸೇವೆ ಸಲ್ಲಿಸುತ್ತಿರುವ ರೇಣುಕಾ ಯಳಮಲಿ … Continued

ಭಾರತದಲ್ಲಿ 15,823 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,823 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ, ಇದು ದೇಶವು ಹಿಂದಿನ ದಿನಕ್ಕಿಂತ 10.5 % ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಗೆ ಬುಧವಾರ ತಿಳಿಸಿದೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣ 3,40,01,743 ಕ್ಕೆ ಏರಿಕೆಯಾಗಿದೆ. ಅದೇ ಸಮಯದಲ್ಲಿ ಒಟ್ಟು 226 … Continued