ದಿನನಿತ್ಯ ಶಾಲೆಗೆ ಬಾರದ ವಿದ್ಯಾರ್ಥಿಗೆ ಥಳಿಸಿ ಮನಸೋ ಇಚ್ಛೆ ಒದ್ದ ಶಿಕ್ಷಕ…ಈ ರಾಕ್ಷಸೀ ವರ್ತನೆ ವಿಡಿಯೊದಲ್ಲಿ ಸೆರೆ

ಶಾಲೆಗೆ ದಿನನಿತ್ಯ ಬರುತ್ತಿಲ್ಲ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ತಮಿಳುನಾಡಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ವಿದ್ಯಾರ್ಥಿಯನ್ನು ಕೋಲಿನಿಂದ ಹೊಡೆದಿದ್ದಲ್ಲದೆ ಕಾಲಿನಿಂದ ಒದೆಯುವುದು ಸಹ ವಿಡಿಯೊದಲ್ಲಿ ಸೆರೆಯಾಗಿದೆ. ಹೊಡೆದ ಏಟಿಗೆ ವಿದ್ಯಾರ್ಥಿ ಅಳುವುದನ್ನು ಮತ್ತು ಕ್ಷಮೆ ಕೇಳುವುದನ್ನು ಸಹ ವಿಡಿಯೊದಲ್ಲಿ ನೋಡಬಹುದಾಗಿದೆ.

https://twitter.com/i/status/1448350314613010434

ಈ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಚಿದಂಬರಂನ ನಂದನಾರ್ ಶಾಲೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಶಾಲೆಯಲ್ಲಿ 6ರಿಂದ 12ನೇ ತರಗತಿಯ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಏಟುತಿಂದ ವಿದ್ಯಾರ್ಥಿ 12ನೇ ತರಗತಿಯಲ್ಲಿ ಓದುತ್ತಿದ್ದು, ನಿತ್ಯ ಶಾಲೆಗೆ ಬರದ ಕಾರಣ ಶಿಕ್ಷಕ ವಿದ್ಯಾರ್ಥಿಗೆ ಹೊಡೆದಿದ್ದಾರೆ. ವಿದ್ಯಾರ್ಥಿಯ ಕ್ಷಮೆಯಾಚನೆಯ ಬಳಿಕವೂ ಶಿಕ್ಷಕ ನಿರಂತರವಾಗಿ ಹೊಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.
ಶಿಕ್ಷಕ ವಿದ್ಯಾರ್ಥಿಯನ್ನು ಹೊಡೆಯುತ್ತಿರುವುದನ್ನು ಅದೇ ತರಗತಿಯ ವಿದ್ಯಾರ್ಥಿಯೊಬ್ಬ ಕ್ಯಾಮೆರಾದಲ್ಲಿ ಸೆರೆಹಿಡಿದ್ದಾನೆ. ನಂತರ ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಶಿಕ್ಷಕನ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ