ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ: 110 ರೂ. ದಾಟಿದ ಲೀಟರ್‌ ಪೆಟ್ರೋಲ್ ದರ..!

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 110 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.44 ರೂ.ಆಗಿದೆ.
ಇಂಡಿಯನ್ ಆಯಿಲ್ ಕಂಪನಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 35 ಪೈಸೆ ಏರಿಕೆ ಮಾಡಿವೆ. ಇದರಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 104.79 ರೂ. ಆಗಿದ್ದರೆ, ಡೀಸೆಲ್ ಬೆಲೆ ಲೀಟರ್ ಗೆ 93.52ರೂ.ಗೆ ತಲುಪಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.44 ರೂ. ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 99.26 ರೂ.ಗೆ ಏರಿಕೆಯಾಗಿವೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 110.75 ರೂ. ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 101.40 ರೂ.ಗೆ ಏರಿಕೆಯಾಗಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ