ತೈವಾನ್​ನಲ್ಲಿ ಬೆಂಕಿ ದುರಂತ; 46 ಜನರ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

ತೈವಾನ್: ದಕ್ಷಿಣ ತೈವಾನ್‌ನ ನಗರವಾದ ಕಾಹೊಹ್‌ಸ್ಯುಂಗ್​ನಲ್ಲಿ ಬುಧವಾರ ರಾತ್ರಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ್ದು, 46 ಜನರು ಸಾವನ್ನಪ್ಪಿದ್ದಾರೆ. 13 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಗ್ನಿ ದುರಂತದಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವ ಮುನ್ನ ಅನೇಕ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು … Continued

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜಾ ಪಂಡಲ್‌ಗಳು ಧ್ವಂಸ, ಕನಿಷ್ಠ 3 ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜಾ ಪಂಡಲ್‌ಗಳು ಮತ್ತು ವಿಗ್ರಹಗಳ ಮೇಲೆ ಹಲವಾರು ದಾಳಿಗಳು ನಡೆದಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದುರ್ಗಾಪೂಜೆ ಆಚರಣೆಯಲ್ಲಿ ಕೋಮು ಉದ್ವಿಗ್ನತೆ ಆವರಿಸಿದೆ. ಕೊಮಿಲ್ಲಾ ಪಟ್ಟಣದ ನನುವಾರ್ ದಿಗಿ ಸರೋವರದ ಬಳಿ ದುರ್ಗಾ ಪೂಜಾ ಪಂಡಲ್‌ ಒಂದರಲ್ಲಿ ಕುರಾನ್ ಅನ್ನು ಅಪವಿತ್ರಗೊಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ … Continued

ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ: ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ, ಅ.20ರ ವರೆಗೆ ಜೈಲು ವಾಸ​

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ ಅವರ ಮಗ ಆರ್ಯನ್​ ಖಾನ್​ಗೆ ಇಂದು (ಗುರುವಾರ) ಸಹ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆ ಮುಂದೂಡಿತ್ತು. ಇಂದು (ಗುರವಾರ) ವಿಚಾರಣೆ ನಡೆಸಿದ … Continued

ಸಹಾಯಕ ಪ್ರಾಧ್ಯಾಪಕರ ನೇಮಕ: 2023ರ ವರೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ

ನವದೆಹಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯ ಮಾಡಿದ್ದು, ಆದರೆ ಈ ಬಾರಿ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನಿಯಮದಿಂದ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದು ತಾನೇ ಮಾಡಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ. ಕಳೆದ ಎರಡು … Continued

ದಸರಾ ಬಳಿಕ ಕರ್ನಾಟಕದಲ್ಲಿ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈಟ್​ ಕರ್ಫ್ಯೂ ವಿಸ್ತರಿಸಲಾಗಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆ ಕೊರೊನಾ ನಿಯಮಗಳನ್ನು ಕೂಡ ಕೊಂಚ ಬಿಗಿಗೊಳಿಸಲಾಗಿದೆ. ದಸರಾ ಹಬ್ಬ ಮುಗಿದ ಬಳಿಕ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಸರಾ ಹಬ್ಬದ ಬಳಿಕ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ … Continued

ರೈತರಿಗೆ ಮತ್ತೆ ಬೆಂಬಲಿಸಿ ವಾಜಪೇಯಿ ಭಾಷಣದ ವಿಡಿಯೊ ತುಣುಕು ಹಂಚಿಕೊಂಡ ಬಿಜೆಪಿಯ ವರುಣ್ ಗಾಂಧಿ..!

ನವದೆಹಲಿ: ಸಂಸದ ವರುಣ್‍ಗಾಂಧಿ ಮತ್ತೆ ಬಿಜೆಪಿ ಪಕ್ಷಕ್ಕೆ ರೈತರ ಬೆಂಬಲಿಸಿ ಟ್ವೀಟ್‌ ಮಾಡಿದ್ದಾರೆ. ಆದರೆ ಈ ಸಲ ಮಾಝಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿಯವರು ರೈತರನ್ನು ಬಂಬಲಿಸಿ ಮಾತನಾಡಿದ ವಿಡೊಯೊವೊಂದನ್ನು ಹಂಚಿಕೊಂಡಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 1980ರಭಾಷಣದ ಸಂಕ್ಷಿಪ್ತ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ … Continued

ಸಿದ್ದಾಪುರ: ಸಾಂಬಾರು ಸರಿಯಿಲ್ಲವೆಂದು ತಾಯಿ, ತಂಗಿಯನ್ನು ಗುಂಡು ಹಾರಿಸಿ ಕೊಂದ ಯುವಕ!

ಸಿದ್ದಾಪುರ: ಗುಂಡು ಹಾರಿಸಿ ಹೆತ್ತ ತಾಯಿ ಮತ್ತು ತಂಗಿಯನ್ನು ಯುವಕ ಹತ್ಯೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ. ಸಾಂಬಾರ್ ಸರಿಯಿಲ್ಲ ಅಂತ ಮದ್ಯದ ನಶೆಯಲ್ಲಿ ಕೊಲೆ ಮಾಡಿದ್ದಾನೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮದ ಕುಡಗೋಡು ಬಳಿ ಸಂಭವಿಸಿದೆ. ತಾಯಿ ಪಾರ್ವತಿ ನಾರಾಯಣ ಹಸ್ಲರ್ (42) … Continued

ಕಬಡ್ಡಿ ಆಡಿ ಗಮನ ಸೆಳೆದ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾಸಿಂಗ್.. ವೀಕ್ಷಿಸಿ

ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಮಹಿಳೆಯರೊಂದಿಗೆ ಕಬಡ್ಡಿ ಆಡಿ ಗಮನ ಸೆಳೆದಿದ್ದಾರೆ. ಮಧ್ಯಪ್ರದೇಶದ ಭೂಪಾಲ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಿಂಗ್ ಅವರು ವಿಶ್ವ ಪ್ರಸಿದ್ದ ಕಾಳಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕ್ರೀಡಾಂಗಣದಲ್ಲಿ ಕಬಡ್ಡಿ ಆಡುತ್ತಿದ್ದ ಯುವತಿಯರು ತಮ್ಮೊಂದಿಗೆ ಕಬಡ್ಡಿ ಆಡುವಂತೆ ಮನವಿ ಮಾಡಿಕೊಂಡಾಗ ಕೇಸರಿ ರೂಮಾಲು ಸುತ್ತಿ ಅಂಕಣಕ್ಕೆ … Continued

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ: 110 ರೂ. ದಾಟಿದ ಲೀಟರ್‌ ಪೆಟ್ರೋಲ್ ದರ..!

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದ ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 110 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 108.44 ರೂ.ಆಗಿದೆ. ಇಂಡಿಯನ್ ಆಯಿಲ್ ಕಂಪನಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 35 ಪೈಸೆ ಏರಿಕೆ … Continued

ಭಾರತದಲ್ಲಿ 18,987 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ನವದೆಹಲಿ: ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನ ಪ್ರಮಾಣ ಶೇ.1.44ರ ಅನುಪಾತದಲ್ಲೇ ನಿಯಂತ್ರಣದಲ್ಲಿದ್ದು, 18,987 ಮಂದಿಗೆ ಹೊಸದಾಗಿ ಸೋಂಕು ತಗಲಿದೆ. 246 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿನ ಸಂಖ್ಯೆ 3,40,20,730ರಷ್ಟಾಗಿದೆ. ಹಿಂದಿನ ದಿನಕ್ಕೆ ಹೋಲಿಸಿದರೆ 1067 ಮಂದಿಗೆ ಕಡಿಮೆ ಸೋಂಕು ತಗುಲಿದೆ. ದಿನದ ಸೋಂಕಿನ ಪ್ರಮಾಣ ಶೇ.1.46ರಷ್ಟು ಮಾತ್ರ. ಇದಕ್ಕೆ ಪ್ರತಿಯಾಗಿ ಚೇತರಿಕೆ ಪ್ರಮಾಣದಲ್ಲಿ … Continued