ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲು

ಕೋಲಾರ: ಆಯುಧ ಪೂಜೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದಲ್ಲದೆ ಬೇರೆಯವರ ಹೆಸರಿನಲ್ಲಿದ್ದ ಬಂದೂಕು ಬಳಕೆ ಮಾಡಿದ ಹಿನ್ನೆಲೆ ಮಾಸ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಆಯುಧ ಪೂಜೆ ಮುಗಿದ ಬಳಿಕ ಶಾಸಕ ಕೆ.ವೈ.ನಂಜೇಗೌಡ ತಮ್ಮ ಸಹೋದರ ಈರೇಗೌಡನ ಹೆಸರಿನಲ್ಲಿರುವ ಬಂದೂಕು ಬಳಸಿ ಗುಂಡು ಹಾರಿಸಿದ್ದರು. ಸದ್ಯ ಈಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement