ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ಅ. 17ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ.
ಕರ್ನಾಟಕ ಮಾತ್ರವಲ್ಲದೆ ಪಕ್ಕದ ರಾಜ್ಯವಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲೂ ಮಳೆ ಹೆಚ್ಚಾಗಲಿದೆ.
ಜವಾದ್ ಚಂಡಮಾರುತ ಏಳುವ ಸಾಧ್ಯತೆ ಇರುವುದರಿಂದ ದಕ್ಷಿಣ ಭಾರತದಲ್ಲಿ ಮಳೆ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಕಲಬುರ್ಗಿ, ಬೀದರ್‌, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳ ಕೆಲವು ಭಾಗದಲ್ಲಿ ಇನ್ನೂ 3 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 17ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.
ಕೇರಳದಲ್ಲಿ ಮಳೆ ಹೆಚ್ಚಾಗಿರುವುದರಿಂದ ಘಟ್ಟ ಪ್ರದೇಶಗಳಲ್ಲಿ ಸಂಜೆಯ ಬಳಿಕ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಗುಡ್ಡ ಕುಸಿತವಾಗುವ ಭೀತಿ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ನೀಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಇಡುಕ್ಕಿ ಸೇರಿದಂತೆ ಕೇರಳದ 7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಪುದುಚೆರಿ, ಗೋವಾ, ಮಹಾರಾಷ್ಟ್ರದಲ್ಲಿ 3 ದಿನ ಭಾರೀ ಮಳೆಯಾಗಲಿದೆ.
ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪುದುಚೇರಿ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಗೋವಾ, ಕಾರೈಕಲ್‌, ಪಶ್ಚಿಮ ಬಂಗಾಳ, ಅರಣಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್​ಗಢ, ಒಡಿಶಾ, ಸಿಕ್ಕಿಂನಲ್ಲಿ ಇಂದು ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement