ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೇನಾಧಿಕಾರಿ (ಜೆಸಿಒ) ಹಾಗೂ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಪೂಂಚ್-ರಾಜೌರಿ ಅರಣ್ಯದಲ್ಲಿ ಐವರು ಸೇನಾ ಯೋಧರು ಹುತಾತ್ಮರಾದ ನಾಲ್ಕು ದಿನಗಳ ನಂತರ ಅದೇ ಪ್ರದೇಶದಲ್ಲಿ ಸೇನೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯಿತು.
ಈಗ ನಡೆಯುತ್ತಿರುವ ಗುಂಡಿನ ಚಕಮಕಿ ಕಾರಣ ಜಮ್ಮು-ಪೂಂಚ್-ರಾಜೌರಿ ಹೆದ್ದಾರಿ ಬಂದ್ ಮಾಡಲಾಗಿದೆ.
ಅಕ್ಟೋಬರ್ 10 ರಂದು ತಡರಾತ್ರಿ ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ ಭಯೋತ್ಪಾದಕರ ಗುಂಪಿನೊಂದಿಗೆ ಎನ್ ಕೌಂಟರ್ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ತಡರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ಜೆಸಿಒ ಸಹಿತ ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದಾರೆ ಎಂದು ಸೇನೆ ಗುರುವಾರ ರಾತ್ರಿ ತಿಳಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ