ರಾಜೀನಾಮೆ ಹಿಂಪಡೆದ ನವಜೋತ್ ಸಿಂಗ್ ಸಿಧು : ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಮುಂದುವರಿಕೆ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ನವಜೋತ್ ಸಿಂಗ್ ಸಿಧು ಹಿಂಪಡೆದಿದ್ದಾರೆ. ಮತ್ತು ಅದೇ ಹುದ್ದೆಯಲ್ಲಿ ತಮ್ಮ ಕರ್ತವ್ಯವನ್ನು ಮುಂದುವರಿಸಲಿದ್ದಾರೆ.
ಶುಕ್ರವಾರ, ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ನಂತರ, ನವಜೋತ್ ಸಿಂಗ್ ಸಿಧು “ನಾನು ನನ್ನ ಎಲ್ಲಾ ಕಳವಳಗಳನ್ನು ರಾಹುಲ್ ಗಾಂಧಿಯೊಂದಿಗೆ ಹಂಚಿಕೊಂಡಿದ್ದೇನೆ. ಎಲ್ಲವನ್ನೂ ಬಗೆಹರಿಸಲಾಗಿದೆ” ಎಂದು ಹೇಳಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪಂಜಾಬಿನ ಉಸ್ತುವಾರಿ ಹರೀಶ್ ರಾವತ್, “ಅವರು [ಸಿದ್ದು] ರಾಹುಲ್ ಗಾಂಧಿಯೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಾಗೂ ಅವರು ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಹಿಂಪಡೆಯುವ ಭರವಸೆ ನೀಡಿದರು. ಅವರು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ತಮ್ಮ ಕರ್ತವ್ಯಗಳನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 28 ರಂದು, ನವಜೋತ್ ಸಿಂಗ್ ಸಿಧು ಪಕ್ಷದ ಪಂಜಾಬ್ ಘಟಕದಲ್ಲಿ ತೊಂದರೆ ಉಂಟಾದ ಕಾರಣ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದಾಗ್ಯೂ, ಪಕ್ಷದ ನಾಯಕತ್ವವು ಅವರ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲಿಲ್ಲ ಮತ್ತು ದೆಹಲಿಯಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಕೇಳಿತು.
ಗುರುವಾರ, ನವಜೋತ್ ಸಿಂಗ್ ಸಿಧು ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಮತ್ತು ಪಂಜಾಬ್ ಉಸ್ತುವಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರನ್ನು ಪಕ್ಷದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು.

ಪ್ರಮುಖ ಸುದ್ದಿ :-   ಅತ್ಯಧಿಕ ಅಪಾಯದ ಮಟ್ಟ 6ರ ವಿರುದ್ಧ ರಕ್ಷಣೆಗಾಗಿ ದೇಶದ ಅತ್ಯಂತ ಹಗುರ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ ಡಿ ಆರ್‌ ಡಿ ಒ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement