ವಿಜಯ ದಶಮಿಯಂದು ಗ್ರಾಹಕರಿಗೆ ಮತ್ತೆ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಶಾಕ್‌..!

ನವದೆಹಲಿ: ವಿಜಯದಶಮಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿವೆ.
ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಳೆದ ಎರಡು ದಿನಗಳಿಂದ ಸತತವಾಗಿ ಏರಿಕೆ ಮಾಡುತ್ತಿವೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.15, ಶುಕ್ರವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.
ಇಂದು (ಶುಕ್ರವಾರ) ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಏರಿಕೆ ಮಾಡಲಾಗಿದೆ. ಒಂದು ಲೀಟರ್ ಡೀಸೆಲ್ ದರದಲ್ಲಿ 35 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಈಗ ಡೀಸೆಲ್ ದರವೂ ಸಹ 100ರ ಗಡಿ ದಾಟಿದೆ.

ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆ
ದೇಶದ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ ಪ್ರತಿ ಲೀಟರ್‌ಗೆ ಪೆಟರೋಲ್‌ ಬೆಲೆ 105.14 ರೂ.ಗಳಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.87 ರೂ.ಗಳಿಗೆ ಹೆಚ್ಚಳವಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆಗೆ 34 ಪೈಸೆ ಹೆಚ್ಚಳದಿಂದ 111.09 ರೂ. ಆಗಿದ್ದರೆ, ಲೀಟರ್ ಡೀಸೆಲ್ ದರವ 37 ಪೈಸೆ ಹೆಚ್ಚಳವಾಗಿ 101.78 ರೂ.ಗೆ ಏರಿಸಲಾಗಿದೆ.
ಕೋಲ್ಕತ್ತಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 105.76 ಮತ್ತು 96.98 ರೂ. ಆಗಿದ್ದು, ಚೆನ್ನೈನಲ್ಲಿ ಲೀಟರ್‌ ಪೆಟ್ರೋಲ್ 102.40 ಮತ್ತು ಲೀಟರ್ ಡೀಸೆಲ್ 98.26 ರೂ. ಆಗಿದೆ.

ಪ್ರಮುಖ ಸುದ್ದಿ :-   ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ರೂ.
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲಿಗೆ 108.80 ರೂ. ಮತ್ತು ಪ್ರತಿ ಲೀಟರ್‌ ಡೀಸೆಲಿಗೆ 99.63 ರೂ. ಆಗಿದೆ. ಹೈದರಾಬಾದ್‌ನಲ್ಲಿ ಒಂದು ಲೀಟರ್ ಪೆಟ್ರೋಲ್ ಈಗ 109.37 ಮತ್ತು ಡೀಸೆಲ್ ಬೆಲೆ 102.42 ರೂ.ಗಳಾಗಿದೆ. ಕಳೆದ ಮೂರು ವಾರಗಳಲ್ಲಿ 17 ಬಾರಿ ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ.
ದೇಶದ ಬಹುತೇಕ ಭಾಗಗಳಲ್ಲಿ ಲೀಟರ್‌ ಪೆಟ್ರೋಲ್ ಬೆಲೆ ಈಗಾಗಲೇ 100 ರೂ.ಗಿಂತ ಹೆಚ್ಚಿದ್ದರೆ, ಮಧ್ಯಪ್ರದೇಶ, ರಾಜಸ್ಥಾನ, ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಡ, ಬಿಹಾರ, ಕೇರಳ, ಕರ್ನಾಟಕ ಮತ್ತು ಲೇಹ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಡೀಸೆಲ್ ದರಗಳು 100 ರೂ.ಗಳನ್ನು ದಾಟಿದೆ.

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement