ಕರ್ನಾಟಕದಲ್ಲಿ ಶನಿವಾರ 264 ಜನರಿಗೆ ಹೊಸದಾಗಿ ಕೊರೊನಾ ದೃಢ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಶನಿವಾರ) 264 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 6 ಸಾವು ಸಂಭವಿಸಿದೆ. 421 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಒಟ್ಟು 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ . ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 9,508 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 121 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,245 ಕ್ಕೆ ಏರಿಕೆಯಾಗಿದೆ. 12,26,303 ಜನರು ಗುಣಮುಖರಾಗಿದ್ದಾರೆ. ಇಂದು ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ 16,209 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,732 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೊನಾ ಸೋಂಕಿನ ವಿವರ..:
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 121, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 34, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 16, ಹಾವೇರಿ 1, ಕಲಬುರಗಿ 1, ಕೊಡಗು 12, ಕೋಲಾರ 7, ಕೊಪ್ಪಳ 0, ಮಂಡ್ಯ 7, ಮೈಸೂರು 21, ರಾಯಚೂರು 1, ರಾಮನಗರ 2, ಶಿವಮೊಗ್ಗ 5, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ