ಕಾಂಗ್ರೆಸ್‌ಗೆ ನಾನೇ ಪೂರ್ಣಾವಧಿ ಸಕ್ರಿಯ ಅಧ್ಯಕ್ಷೆ,: ಜಿ- 23 ಗುಂಪಿಗೆ ಕಠಿಣ ಸಂದೇಶ ರವಾನಿಸಿದ ಸೋನಿಯಾ ಗಾಂಧಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಹಾಗೂ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೇ ಕಾಂಗ್ರೆಸ್‌ ಪಕ್ಷಕ್ಕೆ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ತೀವ್ರ ಕುತೂಲಹ ಕೆರಳಿಸಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು (ಶನಿವಾರ) ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಆರಂಭವಾಗಿದೆ. ಕೊರೊನಾದಿಂದ ಒಂದೂವರೆ ವರ್ಷದಿಂದ ನಡೆಯದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಶನಿವಾರ ಆರಂಭವಾಯಿತು.
ಕಾಂಗ್ರೆಸ್ಸಿನ ಸುಮಾರು 52 ಪ್ರಮುಖ ನಾಯಕರು ಪಾಲ್ಗೊಂಡಿದ್ದು, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ದಿಗ್ವಿಜಯ್ ಸಿಂಗ್ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ಐದು ಹಿರಿಯ ನಾಯಕರು ಕಾರಣಾಂತರಗಳಿಂದ ಭಾಗವಹಿಸಿಲ್ಲ.
ಅವರು ಪಂಜಾಬ್ ಮತ್ತು ಛತ್ತೀಸ್‌ಗಡದಲ್ಲಿ ಅದರ ಹಿರಿಯ ಸದಸ್ಯರ ನಡುವಿನ ಸಾರ್ವಜನಿಕ ಭಿನ್ನಾಭಿಪ್ರಾಯ ಮತ್ತು ನಂತರದ ಗುಂಪುಗಾರಿಕೆಯು ಕೆಲವು ತಿಂಗಳುಗಳಿಂದ ಕಾಂಗ್ರೆಸ್‌ಗೆ ದೊಡ್ಡ ತಲೆನೋವನ್ನು ನೀಡುತ್ತಿದೆ.
ಸಭೆಯಲ್ಲಿ ಪಕ್ಷದ ಸಾಂಸ್ಥಿಕ ಚುನಾವಣೆ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯಂತಹ ಪ್ರಮುಖ ವಿಷಯಗಳ ಕುರಿತು ಕಾಂಗ್ರೆಸ್‌ನ ಉನ್ನತ ಮಟ್ಟದ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಂದಿನ ಭವಿಷ್ಯ ಮತ್ತು ಮುಂದಿನ ರಾಜಕೀಯ ತಂತ್ರಗಾರಿಕೆ ಹಿನ್ನಲೆಯಲ್ಲಿ ಈ ಸಭೆ ಅತ್ಯಂತ ನಿರ್ಣಾಯಕವಾಗಿದೆ ಎನ್ನಲಾಗಿದೆ.

ಕಾಂಗ್ರೆಸ್‌ಗೆ ನಾನೇ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷೆ
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾಗಾಂಧಿ, ಪೂರ್ಣ ಸಮಯದ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಶೀಘ್ರದಲ್ಲೇ ಪೂರ್ಣ ಪ್ರಮಾಣದ ಸಾಂಸ್ಥಿಕ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದರು. ಸೋನಿಯಾ ಗಾಂಧಿ ಅವರು ಪೂರ್ಣ ಸಮಯದ ಪಕ್ಷದ ಅಧ್ಯಕ್ಷರಾಗಿ ತಮ್ಮ ಪಾತ್ರವನ್ನು ಒತ್ತಿ ಹೇಳಿದರು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ಪಕ್ಷದ ಜಿ -23 ನಾಯಕರಿಗೆ ನೀಡಿದ ಕಠಿಣ ಸಂದೇಶದಲ್ಲಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ “ಪೂರ್ಣ ಸಮಯ ನಾನೇ ಕಾಂಗ್ರೆಸ್‌ ಅಧ್ಯಕ್ಷೆ ಎಂದು ಹೇಳಿದರು, ನಾಯಕರು ಮಾಧ್ಯಮದ ಮೂಲಕ ತನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಕಳೆದ ವರ್ಷ ಸಾಂಸ್ಥಿಕ ಪರಿಷ್ಕರಣೆಗಾಗಿ ಒತ್ತಾಯಿಸಿದ  23 ಮಂದಿಯ ಗುಂಪಿನ ನಾಯಕರಲ್ಲಿ ಒಬ್ಬರಾದ ಕಪಿಲ್ ಸಿಬಲ್ ಹೇಳಿಕೆ ನಂತರ ಸೋನಿಯಾ ಗಾಂಧಿಯವರ ಟೀಕೆಗಳು ಬಂದವು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ತಕ್ಷಣದ ಸಭೆ ಕರೆಯಬೇಕು ಮತ್ತು ಪೂರ್ಣಾವಧಿ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ ಎಂದು ಕಪಿಲ್‌ ಸಿಬಲ್ ಹೇಳಿದ್ದರು.

ಕಾಂಗ್ರೆಸ್‌ ಪಕ್ಷಕ್ಕೆ ನಾನೇ ಪೂರ್ಣಾವಧಿಯ, ಸಕ್ರಿಯ ಅಧ್ಯಕ್ಷೆ.. ಆದರೆ ಅದು ನೀವು ಒಪ್ಪಿದರೆ ಮಾತ್ರ. ಇಡೀ ಸಂಘಟನೆ ಕಾಂಗ್ರೆಸ್‌ನ ಪುನರುಜ್ಜೀವನವನ್ನು ಬಯಸುತ್ತದೆ. ಇದಕ್ಕೆ, ಒಗ್ಗಟ್ಟು, ಪಕ್ಷದ ಹಿತವೇ ಅಂತಿಮ ಎಂಬ ಮನೋಭವಾ ಅಗತ್ಯ. ಎಲ್ಲಕ್ಕಿಂತ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ವಿಧಾನಸಭಾ ಚುನಾವಣೆಗೆ ನಮ್ಮ ಸಿದ್ಧತೆಗಳು ಸ್ವಲ್ಪ ಸಮಯದ ಹಿಂದೆಯೇ ಆರಂಭವಾಗಿದ್ದವು. ನಿಸ್ಸಂದೇಹವಾಗಿ, ನಾವು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದೇವೆ, ಆದರೆ ನಾವು ಒಗ್ಗಟ್ಟಾಗಿದ್ದರೆ, ನಾವು ಶಿಸ್ತುಬದ್ಧರಾಗಿದ್ದರೆ ಮತ್ತು ಪಕ್ಷದ ಹಿತಾಸಕ್ತಿಗಳ ಮೇಲೆ ಮಾತ್ರ ಗಮನ ಹರಿಸಿದರೆ, ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ ಎಂದರು.
ನಾನು ಯಾವಾಗಲೂ ಪ್ರಾಮಾಣಿಕತೆಯನ್ನು ಮೆಚ್ಚಿದ್ದೇನೆ. ಮಾಧ್ಯಮದ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ. ಆದ್ದರಿಂದ ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕ ಚರ್ಚೆ ನಡೆಸೋಣ. ಇಲ್ಲಿ ಕೈಗೊಂಡ ನಿರ್ಣಯ ಮತ್ತು ಸಿಡಬ್ಲ್ಯೂಸಿಯ ಸಾಮೂಹಿಕ ನಿರ್ಧಾರವನ್ನೇ ಈ ಕೊಠಡಿಯ ನಾಲ್ಕು ಗೋಡೆಗಳ ಹೊರಗೆ ಸಂವಹನ ಮಾಡಬೇಕು ಎಂದು ಸದಸ್ಯರಿಗೆ ಸೋನಿಯಾ ಕಿವಿಮಾತು ಹೇಳಿದರು.
ಲಖಿಂಪುರ್-ಖೇರಿ ಬಿಜೆಪಿಯ ಮನಸ್ಥಿತಿಗಿ ಹಿಡಿದ ಕನ್ನಡಿ…:
ಇದೇ ವೇಳೆ ಲಖಿಂಪುರ ಖೇರಿ ಹಿಂಸಾಚಾರದ ವಿಚಾರದಲ್ಲಿ ಸೋನಿಯಾ ಅವರು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಲಖಿಂಪುರ್-ಖೇರಿ ಬಿಜೆಪಿಯ ಮನಸ್ಥಿತಿಗಿ ಹಿಡಿದ ಕನ್ನಡಿಯಾಗಿದ್ದು, ಈ ಆಘಾತಕಾರಿ ಘಟನೆಗಳು ಬಿಜೆಪಿಯ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ರೈತರ ಚಳವಳಿಯನ್ನು ಅದು ಹೇಗೆ ಗ್ರಹಿಸುತ್ತದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement