ಕಾಶ್ಮೀರದಲ್ಲಿ ಬೀದಿ ವ್ಯಾಪಾರಿ, ಬಡಗಿಯನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಕಾಶ್ಮೀರದಲ್ಲಿ ಇಬ್ಬರು ಬೀದಿ ವ್ಯಾಪಾರಿಗಳಿಗೆ ಗುಂಡಿಕ್ಕಿದ ಭಯೋತ್ಪಾದಕರು: ಒಬ್ಬ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ

ಶ್ರೀನಗರ: ಕಣಿವೆಯಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಮಧ್ಯಯೇ ಶನಿವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಬಳಿ ಒಬ್ಬ ಬೀದಿ ವ್ಯಾಪಾರಿ ಹಾಗೂ ಪುಲ್ವಾಮದಲ್ಲಿ ಬಡಗಿ ಕೆಲಸ ಮಾಡುತ್ತಿದ್ದ ಮತ್ತೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಹತ್ಯೆಗೈದಿದ್ದಾರೆ. ಬಿಹಾರದ ಬಂಕಾ ಜಿಲ್ಲೆಯ ಅರವಿಂದಕುಮಾರ್ ಮತ್ತು ಉತ್ತರ ಪ್ರದೇಶದ ಸಹರನ್‌ಪುರದ ಸಗೀರ್ ಅಹ್ಮದ್ ಎಂದು ಗುರುತಿಸಲಾಗಿದೆ.
ಶ್ರೀನಗರ ಮತ್ತು ಪುಲ್ವಾಮದಲ್ಲಿ ಇಬ್ಬರು ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು. ಬಂಕಾ ಬಿಹಾರದ ಅರವಿಂದ ಕುಮಾರ್ ಶಾ ಶ್ರೀನಗರದಲ್ಲಿ ಮತ್ತು ಉತ್ತರ ಪ್ರದೇಶದ ಸಗೀರ್ ಅಹ್ಮದ್ ಅವರನ್ನು ಪುಲ್ವಾಮದಲ್ಲಿ ಗುಂಡಿಟ್ಟು ಕೊಂದಿದ್ದಾರೆ. ಪ್ರದೇಶಗಳನ್ನು ಸುತ್ತುವರಿದು ಹುಡುಕಾಟ ಪ್ರಾರಂಭಿಸಲಾಗಿದೆ ಎಂದು‌ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ, ಇಬ್ಬರು ಶಿಕ್ಷಕರು ಸುಪಿಂದರ್ ಕೌರ್ ಮತ್ತು ದೀಪಕ್ ಚಂದ್, ಪ್ರಮುಖ ಕಾಶ್ಮೀರಿ ಪಂಡಿತ್ ಮತ್ತು ಶ್ರೀನಗರದ ಪ್ರಸಿದ್ಧ ಫಾರ್ಮಸಿಯ ಮಾಲೀಕ ಮಖನ್ ಲಾಲ್ ಬಿಂದ್ರೂ ಮತ್ತು ಬಿಹಾರದ ‘ಚಾಟ್’ ಮಾರಾಟಗಾರ ವೀರೇಂದ್ರ ಪಾಸ್ವಾನ್ ಅವರನ್ನು ಭಯೋತ್ಪಾದಕರು ಕೆಲದಿನಗಳ ಹಿಂದೆ ಹತ್ಯೆ ಮಾಡಿದ್ದರು.
ಶುಕ್ರವಾರ, ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾದ ಒಬ್ಬ ಉಗ್ರನನ್ನು ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ಕೊಲೆಯಾದ ಉಗ್ರನನ್ನು ಶ್ರೀನಗರದ ನಿವಾಸಿ ಶಾಹಿದ್ ಬಶೀರ್ ಶೇಖ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಒಂದು ಎಕೆ -47 ರೈಫಲ್ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ - ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement