ಪಶ್ಚಿಮ ಶಿಕ್ಷಕರ ಕ್ಷೇತ್ರ ಮತದಾರರ ನೋಂದಣಿಗೆ ನವೆಂಬರ್ 6ರ ವರೆಗೆ ಅವಕಾಶ

ಹುಬ್ಬಳ್ಳಿ: ರಾಜ್ಯದ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರು ಸಹ ನವೆಂಬರ್ 6ರ ಒಳಗಾಗಿ ಹೆಸರು ನೋಂದಾಯಿಸಬಹುದಾಗಿದೆ.
ನಮೂನೆ 19 ರಲ್ಲಿ ಅರ್ಜಿಯನ್ನು 2021 ನವೆಂಬರ್ 6 ರೊಳಗಾಗಿ ಮತದಾರರ ನೋಂದಣಾಧಿಕಾರಿಗಳು , ಸಹಾಯಕ ಮತದಾರರ ನೋಂದಣಾಧಿಕಾರಿಗಳ / ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿ , ಕರ್ನಾಟಕ ಇವರ ವೆಬ್ ಸೈಟ್ ವಿಳಾಸ www.ceokarnataka.kar.nic.in ಭೇಟಿ ನೀಡಬಹುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement