ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷನಾಗುವ ಬಗ್ಗೆ ಯೋಚಿಸುತ್ತೇನೆ : ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ

ನವದೆಹಲಿ: ತಾನು ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಯೋಚಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು (ಶನಿವಾರ) ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಹುದ್ದೆ ಒಪ್ಪಿಕೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರಿಂದ ಈ ಹೇಳಿಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಅವರ ಮಾತಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಆ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಕಾರಿ ಸಮಿತಿ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಹೇಳಲಾಗಿದ್ದು. ಈ ವೇಳೆ ಎಲ್ಲ ನಾಯಕರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ತಮ್ಮ ನಿರ್ಧಾರ ಹಿಂಪಡೆದು ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಕಾರ ರಾಹುಲ್ ಗಾಂಧಿ ಅವರನ್ನುಮತ್ತೊಮ್ಮೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಕಾಂಗ್ರೆಸ್‌ನ ನಾಯಕರು ಎಲ್ಲರೂ ಒಪ್ಪಿಕೊಂಡಿದ್ದು, ಅವರ ಅಭಿಪ್ರಾಯವನ್ನು ಪರಿಗಣಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಹಿರಿಯ ನಾಯಕರ ಮನವಿಯನ್ನು ಪರಿಗಣಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.
ಸಿದ್ಧಾಂತದ ವಿಚಾರದಲ್ಲಿ ನನಗೆ ಸ್ಪಷ್ಟತೆ ಬೇಕು
ಇದೇ ವೇಳೆ, ಪಕ್ಷದ ನಾಯಕರಿಂದ ಸಿದ್ಧಾಂತದ ಮಟ್ಟದಲ್ಲಿ ನನಗೆ ಸ್ಪಷ್ಟತೆ ಬೇಕು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಚುನಾವಣೆಯವರೆಗೂ ರಾಹುಲ್ ಗಾಂಧಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಕೆಲವು ನಾಯಕರು ಹೇಳಿದರು ಎಂದು ವರದಿಗಳು ತಿಳಿಸಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಹೀನಾಯ ಸೋಲಿನ ನಂತರ ಆಗ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ತಮ್ಮ ಸ್ಥಾನವನ್ನು ತ್ಯಜಿಸಿದ್ದರು. ಅವರ ರಾಜೀನಾಮೆ ನಂತರ ನಾಯಕತ್ವದಲ್ಲಿ ಬಿಕ್ಕಟ್ಟು ತಲೆದೋರಿ ಅದರಿಂದ ಪಕ್ಷ ಇನ್ನೂ ಹೊರಬಂದಿಲ್ಲ. ರಾಹುಲ್ ಗಾಂಧಿ ರಾಜೀನಾಮೆ ನಂತರ ಅವರ ತಾಯಿ ಸೋನಿಯಾ ಗಾಂಧಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement