ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಡೆಂಗ್ಯೂ: ಏಮ್ಸ್‌

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌)ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮನಮೋಹನ್‌ ಸಿಂಗ್‌ ಅವರ ರಕ್ತದ ಪ್ಲೇಟ್ಲೆಟ್ಸ್ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೃದ್ರೋಗ ತಜ್ಞ ನಿತೀಶ್‌ ನಾಯಕ್‌ ಅವರ ಮಾರ್ಗದರ್ಶನದಲ್ಲಿ ವೈದ್ಯರ ತಂಡವು ಮನಮೋಹನ್‌ ಸಿಂಗ್‌ ಅವರಿಗೆ ಚಿಕಿತ್ಸೆ ನೀಡುತ್ತಿದೆ.
89 ವರ್ಷ ವಯಸ್ಸಿನ ಮನಮೋಹನ್‌ ಸಿಂಗ್‌ ಅವರು ಜ್ವರ, ಆಯಾಸದ ಕಾರಣ ಏಮ್ಸ್‌ ಆಸ್ಪತ್ರೆಗೆ ಬುಧವಾರ ಚಿಕಿತ್ಸೆಗೆ ದಾಖಲಾಗಿದ್ದರು. ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವಿಯಾ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾ ಸಿಂಗ್‌ ಅವರ ಆರೋಗ್ಯ ಸ್ಥಿತಿ ಕುರಿತು ವಿಚಾರಿಸಿದರು.

ನಿಮ್ಮ ಕಾಮೆಂಟ್ ಬರೆಯಿರಿ

advertisement