ವಿದ್ಯಾರ್ಥಿಗಳಿಗೆ ಭಾನುವಾರವೂ ತರಗತಿ, 1-5ನೇ ತರಗತಿ ಆರಂಭ:ಎರಡು ದಿನಗಳಲ್ಲಿ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೊನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಪೂರ್ತಿಗೊಳಿಸಲು ಶನಿವಾರ, ಭಾನುವಾರವೂ ತರಗತಿ ನಡೆಸಲು ಚಿಂತನೆ ನಡೆದಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ 1 ರಿಂದ 5ನೇ ತರಗತಿಗಳನ್ನು ಆರಂಭಿಸುವ ಕುರಿತು ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವ ಸಲಹೆ ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ. ಪಠ್ಯ ಕ್ರಮವನ್ನು ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸಲು ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಶೀಘ್ರವೇ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement