ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನದ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಸರ್ವಧರ್ಮ ಪ್ರಾರ್ಥನಾ ಮಂದಿರದಲ್ಲಿ ಮತಾಂತರಕ್ಕೆ ಪ್ರಚೋದನೆ‌ ಮಾಡುತ್ತಿದ್ದ ಸೋಮಲಿಂಗ ಅವರಾದಿ ಎಂಬವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ನವನಗರದ ಪೊಲೀಸ್ ಠಾಣೆ ಮುಂದೆ ಭಾನುವಾರ ಪ್ರತಿಭಟನೆ ‌ನಡೆಸಿದರು.
ವಿವಾರದ ವಿಶೇಷ ಪ್ರಾರ್ಥನೆಗೆ ಕರೆದುಕೊಂಡ ಬಂದ 7-8 ಜನರನ್ನು ಮತಾಂತರಕ್ಕೆ ಯತ್ನಿಸಲಾಗಿದೆ ಎಂಬುದು ಹಿಂದೂ ಸಂಘಟನೆಗಳ ಆರೋಪ. ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನು ಕರೆತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದ್ದಾರೆ. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇವರು ಬೇರೆಯವರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು.
ಈ ವೇಳೆ ಕ್ರೈಸ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಆಗಮಿಸಿದ್ದಾರೆ.
ಮತಾಂತರಕ್ಕೆ ಪ್ರಚೋದನೆ ನೀಡಿದ ಸೋಮು ಅವರಾದಿ ಅವರನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಆವರಣಕ್ಕೆ ಕರೆದುಕೊಂಡು ‌ಬಂದರೂ ಪೊಲೀಸರು‌ ಬಂಧಿಸಿಲ್ಲ. ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆಯವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ‌ಮುಂದುವರಿಸಿದ್ದಾರೆ.
ವಿವಾರದ ವಿಶೇಷ ಪ್ರಾರ್ಥನೆಗೆ ಕರೆದುಕೊಂಡ ಬಂದ 7-8 ಜನರನ್ನು ಮತಾಂತರಕ್ಕೆ ಯತ್ನಿಸಲಾಗಿದೆ ಎಂಬುದು ಹಿಂದೂ ಸಂಘಟನೆಗಳ ಆರೋಪ.

ಪ್ರಮುಖ ಸುದ್ದಿ :-   ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement