ಬೆಂಗಳೂರು ವಿವಿಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾಲ್ಕು ವರ್ಷಗಳ ಬಿಎ, ಬಿಎಸ್ಸಿ ಪದವಿ ಕೋರ್ಸ್ ಆರಂಭ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ ಬಿಎ ಹಾಗೂ ಬಿಎಸ್ಸಿ ಆನರ್ಸ್ ಪದವಿ ಕೋರ್ಸ್ ಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದಡಿ ಭಾರತದಲ್ಲೇ ಮೊದಲ ಬಾರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾಲ್ಕು ವರ್ಷಗಳ ಬಿಎ ಹಾಗೂ ಬಿಎಸ್ಸಿ ಆನರ್ಸ್ ಪದವಿ ಕೋರ್ಸ್ ಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ.
ಈ ಕೋರ್ಸ್ ಗಳಿಗೆ ಪ್ರಸಕ್ಷ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಸೌಲಭ್ಯವನ್ನು ಕಲ್ಪಿಸಲಾಗುವುದು. ಜೊತೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗುವುದು , ಈ ಅವಕಾಶವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಯೋಜಯಡಿ ಬೆಂಗಳೂರು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಗೆ ನೀಡಲು ಸಂಬಂಧಪಟ್ಟವರಿಂದ ಅನುಮತಿ ಪಡೆಯಲಾಗಿದೆ ಎಂದು ಕುಲಪತಿ ವೇಣುಗೋಪಾಲ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಬೆಂಗಳೂರು ವಿವಿಯ ಜಾಲತಾಣ www.bangaloreuniversity.ac.in ನಲ್ಲಿ ಲಭ್ಯವಿರುವ ಅರ್ಜಿಯನ್ನು ಆನ್ ಲೈನ್ ಮೂಲಕ ಭರ್ತಿ ಮಾಡಿ ದಿನಾಂಕ 28:10:2021 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬಿಎಸ್ ಪದವಿಗಾಗಿ ಪ್ರೊ ಕೃಷ್ಣಮೂರ್ತಿ 9449523166 ಹಾಗೂ ಬಿಎ ಪದವಿಗಾಗಿ ಡಾ ಸುರೇಂದ್ರ ಕುಮಾರ್ 9845109634 ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement