ಮಹಾತ್ಮರ ಬಿಡದ ಟೀಕಾಕಾರರು, ನನ್ನಂಥ ಹುಲು ಮಾನವರನ್ನು ಬಿಡುತ್ತಾರೆಯೇ:ಎಚ್‌ಡಿಕೆಗೆ ಮಾರ್ಮಿಕವಾಗಿ ತಿವಿದ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮತ್ತೊಬ್ಬ ಮಾಝಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಈ ಕುಎಇರು ಟ್ವೀಟ್‌ ಮಾಡಿರುವ ಅವರು, ಮಾಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದುಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು. ಅಂತಹ ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ ಎಂದು ಮಾರ್ಮಿಕವಾಗಿ ಕುಮಾರಸ್ವಾಮಿ ಅವರನ್ನು ತಿವಿದಿರುವ ಸಿದ್ದರಾಮಯ್ಯ ಸಬ್ ಕೋ ಸನ್ಮತಿ ದೇ ಭಗವಾನ್ ಎನ್ನುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಕ್ಸಮರ ಮುಂದುವರಿದಿದೆ.
ಇಂದು (ಭಾನುವಾರ) ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ವಾಗ್ದಾಳಿ ಮುಂದುವರಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement