ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಬಾಬಾ ಗುರ್ಮಿತ್ ರಾಮ್ ರಹೀಂ, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ಧಾರ್ಮಿಕ ಕೇಂದ್ರದ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಹರಿಯಾಣದ ಪಂಚಕುಲ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಡೇರಾ ಸಚ್ಚಾ ಸೌಧದ ಬಾಬಾ ಗುರ್ಮೀತ್ ರಾಮ್ ರಹೀಂ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಕಿಶನ್ ಲಾಲ್, ಜಸ್‌ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್‌ದಿಲ್ ಹತ್ಯೆ ಅಪರಾಧಕ್ಕೆ ಶಿಕ್ಷೆಗೊಳಗಾದ ಇತರ ಆರೋಪಿಗಳಾಗಿದ್ದಾರೆ. ರಾಮ್ ರಹೀಂಗೆ ೩೧ ಲಕ್ಷ ರೂ.ಗಳು ಮತ್ತು ಉಳಿದ ಆರೋಪಿಗಳಿಗೆ ತಲಾ ೫೦ ಸಾವಿರ ರೂ. ದಂಡ ವಿಧಿಸಲಾಗಿದೆ.
ಡೇರಾ ಸಚ್ಚಾ ಸೌಧಾದಿಂದ ಮಾಡಿದ ಕಲ್ಯಾಣ ಕಾರ್ಯಗಳನ್ನು ಉಲ್ಲೇಖಿಸಿ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ರಿಯಾಯಿತಿ ಕೋರಿದ್ದರು. ಆದರೆ, ಸಿಬಿಐ ಇದನ್ನು ವಿರೋಧಿಸಿತು ಮತ್ತು ಐಪಿಸಿ ಸೆಕ್ಷನ್ ೩೦೨ ರ ಅಡಿಯಲ್ಲಿ ಗರಿಷ್ಠ ಶಿಕ್ಷೆಗೆ ಒತ್ತಾಯಿಸಿತು. ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಕಳೆದ ವಾರ ಈ ಐವರನ್ನು ದೋಷಿಗಳೆಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಅದು ಇಂದು (ಸೋಮವಾರ) ಶೀಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement