ಸರ್ಕಾರದ ಮಹತ್ವದ ನಿರ್ಧಾರ..:ಅಕ್ಟೋಬರ್ 25ರಿಂದ 1 ರಿಂದ 5ರ ವರೆಗೆ ಭೌತಿಕ ತರಗತಿ ಶಾಲೆ ಆರಂಭ

ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿಗಳಿಗೆ ಶಾಲೆಯಲ್ಲಿ ಭೌತಿಕ ತರಗತಿಗಳು  ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ.
ಶಾಲೆ ಆರಂಭಕ್ಕೆ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ.

ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯ ಎಂದು ತಿಳಿಸಲಾಗಿದೆ. ಶಿಕ್ಷಕರು ಕಡ್ಡಾಯವಾಗಿ 2 ಡೋಸ್​ ಲಸಿಕೆ ಪಡೆದಿರಬೇಕು ಎಂದೂ ಹೇಳಲಾಗಿದೆ. ತರಗತಿಯಲ್ಲಿ ಶೇಕಡಾ 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು ಎಂದು ಹೇಳಲಾಗಿದ್ದು, ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್​​ ಧರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕೊರೊನಾ ಮೂರನೇ ಅಲೆಯ ಭಯದ ಹಿನ್ನೆಲೆಯಿಂದ 1 ರಿಂದ 5 ನೇ ತರಗತಿ ಆರಂಭವಾಗಿರಲಿಲ್ಲ, ಇದಲ್ಲದೇ ಮಕ್ಕಳಿಗೆ ಕರೋನ ಸೊಂಕಿಗೆ ಲಸಿಕೆ ಬಂದಿರುವ ಹಿನ್ನಲೆಯಲ್ಲಿ

ಶಾಲೆಗೆ ಮಕ್ಕಳಿಗೆ ಬರುವಂತೆ ಮಾಡಲು ಯಾವುದೇ ಬಲವಂತ ಪ್ರಯತ್ನ ಮಾಡುವಂತಿಲ್ಲ, ಜೊತೆಗೆ ಮಕ್ಕಳಿಗೆ ಶಾಲೆಗೆ ಬರಲು ಹಾಜರಾತಿ ಕಡ್ಡಾಯವಲ್ಲ ಎಂದು ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.
ಕೋವಿಡ್‌ ಮಾರ್ಗಸೂಚಿ ಪಾಲಿಸಿ ಶಾಲೆ ಆರಂಭಕ್ಕೆ ಸೂಚನೆ ನೀಡಲಾಗಿದ್ದು, ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಅನುಮತಿ ಅವಶ್ಯಕವಾಗಿದೆ.
ಶಾಲೆಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಸರ್ಕಾರ ತಜ್ಞರ ವರದಿಯನ್ನು ಪಡೆದು  ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಾರ್ಗಸೂಚಿಗಳು..
* ಪೋಷಕರ ಅನುಮತಿ ಪಡೆದು ಮಕ್ಕಳು ತರಗತಿಗೆ ಬರಬೇಕು.
*ಕೊರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು
*ಶೇ.50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
*ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
*ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪುಗೂಡುವಂತಿಲ್ಲ.
* ಶಿಕ್ಷಕರು,ಸಿಬ್ಬಂದಿ ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು.
* ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ.

ಒಂದು ವಾರದ ಮಟ್ಟಿಗೆ ಶಾಲೆಯ ಅವಧಿಯನ್ನು ಕಡಿತ ಮಾಡಲಾಗುವುದು ಬಳಿಕ ಎಂದಿನಂತೆ ಮುಂದುವರೆಯಲಿದೆ ಎಂದು ಸಚಿವ ನಾಗೇಶ ಹೇಳಿದ್ದಾರೆ. ಇದಲ್ಲದೇ ಮಕ್ಕಳ ಪೋಷಕರ ಈಗಾಗಲೇ ಶಾಲೆ ಆರಂಭವಾಗಿರುವುದಕ್ಕೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸದ್ಯಕ್ಕೆ ಎಲ್‌ಕೆಜಿ ಹಾಗೂಯುಕೆಜಿ (LKG, UKG ) ಬಗ್ಗೆ ಇಲಾಖೆ ನಿರ್ಧಾರ ಮಾಡಿಲ್ಲಎಂದು ತಿಳಿಸಿದ್ದಾರೆ.

ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಕೊವಿಡ್ ಹೊಸ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ಈಜುಕೊಳ ಕಾರ್ಯಾಚರಣೆಗೆ ಕೆಲವು ನಿರ್ಬಂಧಗಳ ಅನುಸಾರ ಅವಕಾಶ ನೀಡಲಾಗಿದೆ. ನೂತನ ಮಾರ್ಗಸೂಚಿಯಲ್ಲಿ ಶಾಲಾ ಮರು ಪ್ರಾರಂಭದ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ಈಜುಕೊಳಗಳಲ್ಲಿ ಶೇಕಡಾ 50 ರಷ್ಟು ಕಾರ್ಯಚಾರಣೆಗೆ ಅವಕಾಶ ನೀಡಲಾಗಿದೆ. ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ರಿಲ್ಯಾಕ್ಸೇಷನ್ ನೀಡಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement