ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 22ರ ವರೆಗೂ ಮಳೆ ಮುಂದುವರಿಕೆ..!

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿರಲಿದ್ದು, ಹೀಗಾಗಿ ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ರಾಮನಗರದಲ್ಲಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಇಂದಿನಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

ನಿಮ್ಮ ಕಾಮೆಂಟ್ ಬರೆಯಿರಿ

advertisement