ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ: ಪ್ರಕರಣ ದಾಖಲು

ಚೆನ್ನೈ: ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದಾರೆ. ಈಗ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು ರಾಜಭವನ ತಿಳಿಸಿದೆ.
ಇತ್ತೀಚೆಗೆ ಕೆಲವು ದುಷ್ಕರ್ಮಿಗಳು ಗೌರವಾನ್ವಿತ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ ಮೇಲ್ ಖಾತೆಗಳನ್ನು ಸೃಷ್ಟಿಸಿ ಆಕ್ಷೇಪಾರ್ಹ ವಿಷಯಗಳೊಂದಿಗೆ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದಾರೆ.ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ಹೇಳಿದೆ.
ರಾಜಭವನದ ಅಧಿಕೃತ ಇ-ಮೇಲ್ [email protected] ಮತ್ತು ಅಧಿಕೃತ ಟ್ವಿಟರ್ ಖಾತೆ @rajbhavan_tn”ಆಗಿದ್ದು, ರಾಜಭವನದ ಅಧಿಕೃತ ಇ-ಮೇಲ್ ಅಥವಾ ಟ್ವಿಟರ್ ಖಾತೆಗಳನ್ನು ಹೊರತುಪಡಿಸಿ ಯಾವುದೇ ಖಾತೆಗಳನ್ನು ನಂಬಬೇಡಿ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ಜನರಲ್ಲಿ ಮನವಿ ಮಾಡಿದೆ.

0 / 5. 0

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನಿಮ್ಮ ಕಾಮೆಂಟ್ ಬರೆಯಿರಿ

advertisement