ನವೆಂಬರ್ ತಿಂಗಳಿಂದ ಶಾಲಾ ಮಕ್ಕಳಿಗೆ ಬಿಸಿಯೂಟ ವ್ಯವಸ್ಥೆ

ಬೆಂಗಳೂರು: ರಾಜ್ಯದಲ್ಲಿ 1-5ನೇ ತರಗತಿಯನ್ನ ಪ್ರಾರಂಭ ಮಾಡುತ್ತಿದ್ದೇವೆ. ಅಕ್ಟೋಬರ್ 25 ರಿಂದ 1-5ನೇ ತರಗತಿ ವರೆಗೆ ಮಾರ್ಗಸೂಚಿಯನ್ನ ಪಾಲಿಸಿ ತರಗತಿ ಪ್ರಾರಂಭಿಸುತ್ತಿದ್ದೇವೆ. ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಹಿನ್ನೆಲೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಯನಾಡಿದ ಅವರು, ಅನೇಕ ತಾಲೂಕುಗಳಲ್ಲಿ ಪಾಸಿಟಿವಿಟಿ ದರ ಶೇಕಡಾ 0 ರಷ್ಟಿದೆ. ಇವೆಲ್ಲವನ್ನ ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧರಿಸಿದೆ ಎಎಂದರು..
ನವೆಂಬರ್ ಮೊದಲ ವಾರದಿಂದ ಪೂರ್ತಿ ದಿನ ಶಾಲೆ ಆರಂಭ ಆಗಲಿದೆ. ನವೆಂಬರ್​ ತಿಂಗಳಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಆರಂಭವಾಗಲಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನೂ ಅನುಸರಿಸುತ್ತೇವೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಪಠ್ಯ ಕಡಿತ ಮಾಡುವುದಿಲ್ಲ. ಪಠ್ಯ ಕ್ರಮ ಮುಗಿಸುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ. ನಾನು ಹೋದಲ್ಲೆ ಎಲ್ಲೆಡೆ ಶಾಲೆ ಆರಂಭಿಸುವಂತೆ ಒತ್ತಾಯ ಕೇಳಿಬಂದಿದೆ. ಬಹುತೇಕ ಪೋಷಕರು ಶಾಲೆ ಆರಂಭಿಸಲು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ದಿನ ಬಿಟ್ಟು ದಿನ ಅಂಗನವಾಡಿಗಳು ನಡೆಯುತ್ತಿವೆ. ಅದೇ ಮಾದರಿಯಲ್ಲಿ ಎಲ್ಕೆಜಿ ಹಾಗೂ ಯುಕೆಜಿ (LKG, UKG) ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement