ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 125ಕ್ಕೂ ಹೆಚ್ಚು ಜನರ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು 125ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.
ಮಾಸ್ಕ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು 200 ಕಾರ್ಮಿಕರು ಒಳಗೆ ಸಿಲುಕಿದ್ದರು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡಕ್ಕೆ ಹಾಕಲಾಗಿದ್ದ ಪೈಪ್​ ಹಿಡಿದು ಕೆಳಗಿಳಿಯುವಾಗ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಹಲವರಿಗೆ ಸುಟ್ಟ ಗಾಯವಾಗಿದೆ.
ಕಾರ್ಖಾನೆಯಲ್ಲಿ ದಟ್ಟ ಹೊಗೆಯಿಂದಾಗಿ ಕಾರ್ಯಾಚರಣೆಗೂ ಅಡ್ಡಿಯಾಗಿತ್ತು. ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸೂರತ್​​ನ ಮೇಯರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

 

0 / 5. 0

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement