ಉತ್ತರಾಖಂಡದಲ್ಲಿ ಮಳೆಯಿಂದ 42 ಜನರು ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ

ಡೆಹ್ರಾಡೂನ್‌: ಧಾರಾಕಾರ ಮಳೆಯು ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿದ್ದು, ಮಂಗಳವಾರ ಕನಿಷ್ಠ 42 ಮಳೆ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ.
ಮೇಘಸ್ಫೋಟದಿಂದ ಉಂಟಾದ ಭಾರೀ ಮಳೆಯು ಸರಣಿ ಭೂಕುಸಿತಕ್ಕೆ ಕಾರಣವಾದ ನೈನಿತಾಲ್ ಸೇರಿದಂತೆ ರಾಜ್ಯದ ಕೆಲವು ಭಾಗಗಳು ಉತ್ತರಾಖಂಡದ ಇತರ ಭಾಗಗಳಿಂದ ಸಂಪರ್ಕ ಕಡಿತಗೊಂಡಿವೆ.
ಮಂಗಳವಾರ ವರದಿಯಾದ 42 ಸಾವುನೋವುಗಳಲ್ಲಿ, ನೈನಿತಾಲ್ ಮಾತ್ರ 28 ಸಾವುಗಳು ಸಂಭವಿಸಿದೆ. ನಂತರ ಅಲ್ಮೋರಾ ಮತ್ತು ಚಂಪಾವತ್ ತಲಾ ಆರು ಮತ್ತು ಪಿಥೋರಗಡ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರಕಟಿಸಿದ್ದಾರೆ. ಜಾನುವಾರುಗಳನ್ನು ಕಳೆದುಕೊಂಡವರಿಗೂ ರಾಜ್ಯ ಸರ್ಕಾರ ಅಗತ್ಯ ನೆರವಿನ ‌ಭರವಸೆ ನೀಡಿದೆ.
ಪ್ರವಾಹದಿಂದ ಮುಳುಗಡೆಯಾದ ಸ್ಥಳಗಳಲ್ಲಿ ಇಂದು (ಮಂಗಳವಾರ) ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್​ನಲ್ಲಿ ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ವಿಶೇಷವಾಗಿ ನೈನಿತಾಲ್‌ ರಸ್ತೆಸಂಪರ್ಕ ಕಡಿತವಾಗಿದೆ. ನೈನಿತಾಲ್​ನಲ್ಲಿ ಇಂದು ಸಂಜೆ ಮತ್ತೆ ಐವರು ಕಾರ್ಮಿಕರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಕುಮೋನ್ ಪ್ರಾಂತ್ಯದಲ್ಲಿ ಮನೆಗಳು ಕುಸಿದು ಬಿದ್ದಿವೆ. ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್​ನಲ್ಲಿ ಮಂಗಳವಾರ ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ನೈನಿತಾಲ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕಳೆದ ಮೂರು ದಿನಗಳಿಂದಲೂ ಸುರಿಯುತ್ತಿರುವ ಮಳೆ ಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರರ ಜೊತೆ ಮಾತನಾಡಿದ್ದು, ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement