ಡೆಹ್ರಾಡೂನ್:ಉತ್ತರಾಖಂಡದಲ್ಲಿ ಸುರಿಯುತ್ತಿರುವ ಮಳೆಗೆ 2 ದಿನದಲ್ಲಿ 17 ಜನರು ಮೃತಪಟ್ಟಿದ್ದಾರೆ. ಅನೇ ಕಡೆ ಭೂ ಕುಸಿತಗಳು ಸಂಭವಿಸಿವೆ.
ಒಂದು ಭಯಾನಕ ಘಟನೆಯಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದು ಏಕಾಏಕಿ ಸುರಿದ ಮಳೆಯಿಂದಾಗಿ ಉಂಟಾದ ಭಾರೀ ಪ್ರವಾಹದಲ್ಲಿ ಕೊಚ್ಚಿ ಹೋಗಿತ್ತು. ಆ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣದ ಮೇಲಿನ ಆಸೆಯನ್ನು ಬಿಟ್ಟಾಗಿತ್ತು. ಭೂಕುಸಿತದಿಂದ ಕೊರೆದುಹೋಗಿದ್ದ ಜಾಗದಲ್ಲಿನ ಬಂಡೆಗಳ ನಡುವೆ ಆ ಕಾರು ಸಿಲುಕಿಕೊಂಡಿತ್ತು. ಆ ಕಾರನ್ನು ಬಾರ್ಡರ್ ರೋಡ್ ಆರ್ಗನೈಸೇಷನ್ (BRO) ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಭೋರ್ಗರೆದು ರಭಸವಾಗಿ ಹರಿಯುತ್ತಿದ್ದ ನೀರಿನಿಂದ ಕಾರನ್ನು ಜೆಸಿಬಿಯಲ್ಲಿ ಮೇಲೆತ್ತಿ ಪ್ರಯಾಣಿಕರನ್ನು ಕಾಪಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಬಂಡೆಗಳ ನಡುವೆ ಪ್ರವಾಹದಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬದರೀನಾಥ ರಾಷ್ಟ್ರೀಯ ಹೆದ್ದಾರಿಯ ಬಳಿ ಈ ಘಟನೆ ನಡೆದಿದ್ದು, ಕಾರನ್ನು ಯಾವ ರೀತಿ ಸಿನಿಮೀಯವಾಗಿ ರಕ್ಷಣೆ ಮಾಡಲಾಯಿತು. ಇದಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್ನಲ್ಲಿ ಹರಿದಾಡುತ್ತಿವೆ.
ನಿಮ್ಮ ಕಾಮೆಂಟ್ ಬರೆಯಿರಿ