ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ:ಹಿಂದೂಗಳ 66 ಮನೆ ಧ್ವಂಸ, 20 ಮನೆಗೆ ಬೆಂಕಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಹಿಂಸಾಚಾರ ಮುಂದುವರಿದಿದ್ದು, ಹಿಂದೂಗಳ ಮನೆಗಳನ್ನು ಧ್ವಂಸ ಮಾಡಲಾಗುತ್ತಿದೆ.
ಹಿಂದೂಗಳಿಗೆ ಸೇರಿದ 66 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಕನಿಷ್ಠ 20 ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ ಗುಂಪೊಂದು ದುರ್ಗಾ ಪೂಜೆ ಪೆಂಡಾಲ್‌ಗಳ ಮೇಲೆ ದಾಳಿ ನಡೆಸಿತ್ತು. ಅಲ್ಲದೇ ದೇವಸ್ಥಾನವನ್ನೂ ಧ್ವಂಸ ಮಾಡಿತ್ತು. ಇದನ್ನು ಖಂಡಿಸಿ ಹಿಂದೂಗಳು ಪ್ರತಿಭಟಿಸಿದ್ದರು.
ಇದರ ಬೆನ್ನಲ್ಲೇ ಮತ್ತೊಂದು ದುಷ್ಕೃತ್ಯ ನಡೆದಿದ್ದು, ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ರಂಗಪುರ ಜಿಲ್ಲೆಯ ಗ್ರಾಮವೊಂದಕ್ಕೆ 100 ಜನಕ್ಕೂ ಹೆಚ್ಚು ಮಂದಿ ಗುಂಪೊಂದು ಬಂದಿದ್ದು, ಏಕಾಏಕಿ ಮನೆಗಳಿಗೆ ಬೆಂಕಿ ಇಟ್ಟಿದೆ. 66 ಮನೆಗಳನ್ನು ಧ್ವಂಸ ಮಾಡಿದೆ.
ತದನಂತರ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದು, ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ, ಇದಕ್ಕೆ ಸಂಬಂಧಿಸಿದಂತೆ 52 ಶಂಕಿತರನ್ನು ಬಂಧಿಸಲಾಗಿದೆ ಎಂದು ಎಎಸ್‌ಪಿ ಮೊಹಮ್ಮದ್ ಕಮ್ರುಜ್ಜಮಾನ್ ತಿಳಿಸಿದ್ದಾರೆ.
ಹಿಂದೂಗಳ ಮೇಲೆ ದಾಳಿ:450 ಜನರ ಬಂಧನ..:
ಹಿಂದೂಗಳ ಮೇಲೆ ದಾಳಿ ನಡೆಸಿದ ನಂತರ ಬಾಂಗ್ಲಾದೇಶದಲ್ಲಿ 450 ಜನರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.
ಹಿಂಸಾತ್ಮಕ ಗುಂಪುಗಳನ್ನು ತಡೆಯಲು ಹೋದ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಹಲವಾರು ಹಿಂದೂ ಧಾರ್ಮಿಕ ಸ್ಥಳಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಹಿಂದೂಗಳ ಹಬ್ಬವಾದ ದುರ್ಗಾಪೂಜೆಯಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು 71 ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಬಾಂಗ್ಲಾದೇಶ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. 450 ಶಂಕಿತ ಆರೋಪಿಗಳನ್ನು ಬಂಧಿಸಿದ ನಂತರ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ದಾಖಲೆಯ 613 ದಿನಗಳ ಕಾಲ ಕೋವಿಡ್‌ ಜೊತೆ ಜೀವಿಸಿದ್ದ 72 ವರ್ಷದ ವ್ಯಕ್ತಿ ; ಸಾಯುವ ಮೊದಲು ಆತನ ದೇಹದಲ್ಲಿ ಕೊರೊನಾ ವೈರಸ್‌ 50ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿತ್ತು..!

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement