ಬೆಳಗಾವಿಯಲ್ಲಿ ಅನೈತಿಕ ಪೊಲೀಸ್ ಗಿರಿ: ಪ್ರತ್ಯೇಕ ಘಟನೆಯಲ್ಲಿ ಅನ್ಯಕೋಮಿನ ಯುವಕರ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಯರ ಮೇಲೆ ಹಲ್ಲೆ

ಬೆಳಗಾವಿ: ಈಗ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದ್ದು, ಮೂರು ಪ್ರಕರಣಗಳು ಬೆಳಕಿಗೆ ಬಂದಿದೆ.
ಬೆಳಗಾವಿ:ಈಗ ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ ವರದಿಯಾಗಿದೆ. ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ ಪುಂಡರು ಇಬ್ಬರನ್ನು ಥಳಿಸಿದ್ದಾರೆ.
ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಹತ್ತಿ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದರು.ಆಟೋ ಚಾಲಕ ಉದ್ಯಾನವನದ ಬದಲು ನಿರ್ಜನ ಪ್ರದೇಶದ ಹೊಲಕ್ಕೆ ಕರೆದುಕೊಂಡು ಹೋಗಿ ಸ್ನೇಹಿತರ ಜೊತೆಗೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬೇರೆ ಧರ್ಮದ ಯುವಕನ ಜೊತೆಗೆ ಓಡಾಡ್ತೀಯಾ ಎಂದು ಥಳಿಸಿ ಅವರ ಬಳಿ ಇದ್ದ 20 ಸಾವಿರ ರೂ.ಮೌಲ್ಯದ ಮೊಬೈಲ್, 50 ಸಾವಿರ ರೂ. ನಗದು ಹಣ ಮತ್ತು ಆಧಾರ್‌ ಕಾರ್ಡ್, ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಹಲ್ಲೆ ನಡೆಸಿದ ಬಳಿಕ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಯುವತಿ 20 ಜನರು ನನ್ನ ಮೇಲೆ ರಾಡ್‌, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಳು. ದೂರಿನ ಮೇರೆಗೆ ಬೆಳಗಾವಿ ನಗರದ ಆಟೋ ಚಾಲಕ ದಾವತ್ ಕತೀಬ್, ಅಯುಬ್, ಯುಸೂಫ್ ಪಠಾಣ ಎಂಬವರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.
ಮತ್ತೊಂದು ಘಟನೆಯಲ್ಲಿ ಕಾಲೇಜು ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಇಬ್ಬರು ಯುವತಿಯರನ್ನು ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಅನ್ಯಕೋಮಿನ ಯುವಕರ ಜೊತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿ ಏಕಾಏಕಿ ದಾಳಿ ನಡೆಸಿದ ಕಿಡಿಗೇಡಿಗಳು ಇಬ್ಬರು ಯುವತಿಯರನ್ನು ಕೂಡಿಹಾಕಿ ಅವರ ಮುಖಕ್ಕೆ ಕಟ್ಟಿಕೊಂಡಿದ್ದ ಬಟ್ಟೆ ತೆಗೆಯುವಂತೆ ಹೇಳಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ಪುಂಡರು ವಿಡಿಯೋವನ್ನು ರೆಕಾರ್ಡ್ ಮಾಡಿ ಹರಿಬಿಟ್ಟಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement