ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ಭೂಗರ್ಭ ಶಾಸ್ತ್ರಜ್ಞರ ವರದಿ ಆಧರಿಸಿ ಮುಂದಿನ ಕ್ರಮ

ಕಲಬುರಗಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗುತ್ತಿರುವ ಬಗ್ಗೆ ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಭೂಗರ್ಭಶಾಸ್ತ್ರಜ್ಞರ ವರದಿ ಬಂದ ಮೇಲೆ ಅದರ ತೀವ್ರತೆಯನ್ನು ಆಧರಿಸಿ ಮುಂದೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾವ ಕಾರಣದಿಂದಾಗಿ ಭೂಕಂಪನ ಸಂಭವಿಸುತ್ತಿದೆ, ಯಾಕೆ ನಿರ್ದಿಷ್ಟ ಸ್ಥಳದಲ್ಲಿ ಸಂಭವಿಸುತ್ತಿದೆ ಹಾಗೂ ಯಾವ ಕಾರಣಗಳಿಂದ ಈ ಭಾಗದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಬಗ್ಗೆ ವರದಿ ಭೂಗರ್ಭಶಾಸ್ತ್ರಜ್ಞರ ನೀಡಲಿದ್ದಾರೆ. ಅದರ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇಂದು (ಮಂಗಳವಾರ) ಕಂದಾಯ ಸಚಿವರಾದ ಆರ್. ಅಶೋಕ ಅವರು ವಿಜಯಪುರ ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಭೂಕಂಪನ ಸಂಭವಿಸಿ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.ಹಾನಿಗೊಳಗಾದ ಮನೆಯವರಿಗೆ ಶೆಡ್ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಹೆಚ್ಚುವರಿ ಅನುದಾನ: ಡಿಪಿಆರ್ ಸಿದ್ದಪಡಿಸಲು ಸೂಚನೆ
ಸದ್ಯ ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ 1500 ಕೋಟಿ ರೂ.ಗಳ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಬೇಕು ಎಂದು ಅವರು ತಿಳಿಸಿದರು. ಬಳಕೆ ಮಾಡಿದರೆ ಹೆಚ್ಚುವರಿ 1500 ಕೋಟಿ ರೂ.ಗಳ ನೆರವು ಒದಗಿಸುವುದಾಗಿ ಹೇಳಿದ್ದೆ. ಆದರೆ ಅದರ ಜೊತೆಗೆ ಅಗತ್ಯ ಯೋಜನೆ ಹಾಗೂ ಡಿಪಿಆರ್ ಸಿದ್ದ ಪಡಿಸಿದರೆ ಹೆಚ್ಚುವರಿಯಾಗಿ 1500 ಕೋಟಿ ಅನುದಾನ ಒದಗಿಸುವ ಭರವಸೆಯನ್ನುಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೀಡಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಉಪಚುನಾವಣೆ: ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ
ಹಾನಗಲ್ ಮತ್ತು ಸಿಂದಗಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅತಿ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರು ಏನು ಮಾತನಾಡುತ್ತಾರೆ ಎಂಬುದು ಮುಖ್ಯವಲ್ಲ. ಈ ಎರಡು ಕ್ಷೇತ್ರದಲ್ಲಿ ಮತದಾರರು ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಉತ್ತರಿಸಿದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement