ಶಿಶುಪಾಲನಾ ಸಂಸ್ಥೆಗಳಲ್ಲಿ‌ ಸೆಲೆಬ್ರಿಟಿಗಳ ಜನ್ಮದಿನಾಚರಣೆಗೆ ನಿಷೇಧಿಸಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯಾದ್ಯಂತ ಶಿಶುಪಾಲನಾ ಸಂಸ್ಥೆಗಳಲ್ಲಿ (CCI) ಸೆಲೆಬ್ರಿಟಿಗಳ ಜನ್ಮದಿನಾಚರಣೆಗಳನ್ನು ನಿಷೇಧಿಸಿದ ಆದೇಶ ಹೊರಡಿಸಿದೆ.
ಮಕ್ಕಳ ಸಂರಕ್ಷಣಾ ನಿರ್ದೇಶನಾಲಯ ಹೊರಡಿಸಿದ ಸುತ್ತೋಲೆಯ ಪ್ರಕಾರ, ಸೆಲೆಬ್ರಿಟಿಗ ಜನ್ಮದಿನಾಚರಣೆಗಳು ಸಿಸಿಐಗಳಲ್ಲಿ ವಾಸಿಸುವ ಮಕ್ಕಳ ಮೇಲೆ ಪ್ರತಿಕೂಲ ಮಾನಸಿಕ ಪರಿಣಾಮ ಬೀರುವುದು ಕಂಡುಬಂದಿದೆ. ಹೀಗಾಗಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಶಿಶುಪಾಲನಾ ಸಂಸ್ಥೆಗಳಲ್ಲಿ  ಸೆಲೆಬ್ರಿಟಿಗಳ ಹುಟ್ಟುಹಬ್ಬ ಆಚರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಲಾಗಿದೆ.
ಸರ್ಕಾರಿ ಸುತ್ತೋಲೆಯಲ್ಲಿ ನಿರ್ದಿಷ್ಟವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಮತ್ತು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ನಡೆಸಲ್ಪಡುವ ಶಿಶುಪಾಲನಾ ಗೃಹಗಳು ಸೇರಿದಂತೆ ಸಿಸಿಐಗಳ ಎಲ್ಲಾ ಪಾಲುದಾರರಿಗೆ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ. ಸಿಸಿಐಗಳಲ್ಲಿ ವಾಸಿಸುವ ಬಹುಪಾಲು ಮಕ್ಕಳನ್ನು ಭಿಕ್ಷಾಟನೆ, ಪೋಷಕರ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹಗಳು ಇವೇ ಮೊದಲಾಔುಗಳಿಂದ ರಕ್ಷಣೆಗೊಳಗಾದವರಾಗಿರುತ್ತಾರೆ.

0 / 5. 0

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ನಿಮ್ಮ ಕಾಮೆಂಟ್ ಬರೆಯಿರಿ

advertisement