ವಿಜಯಪುರ: ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಹಾಗೂ ಮೂವರ ಸ್ಥಿತಿ ಗಂಭೀರವಾಗಿದೆ.
ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಬುಧವಾರ ಮುಂಜಾನೆ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದವರನ್ನು ವಿಜಯಪುರ ನಗರದವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ರಸ್ತೆ ಬದಿ ಹಾಳಾಗಿ ನಿಂತಿದ್ದ ಲಾರಿಯನ್ನು ಚಾಲಕ ದುರಸ್ತಿ ಮಾಡುತ್ತಿದ್ದ. ಈ ವೇಳೆ ಕಾರು ಲಾರಿಗೆ ಅಪ್ಪಳಿಸಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಚಾಲಕನ ಜೊತೆಗೆ ಕಾರಿನಲ್ಲಿದ್ದ ಓರ್ವ ಪುರುಷ, ಓರ್ವ ಮಹಿಳೆ ಹಾಗೂ ಒಂದು ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ