ಕಾಶ್ಮೀರ ಎನ್ಕೌಂಟರ್‌: ಇಬ್ಬರು ಭಯೋತ್ಪಾಕರ ಹೊಡೆದುರುಳಿಸಿದ ಸೇನೆ, ಒಬ್ಬ ಯೋಧ ಹುತಾತ್ಮ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಇಂದು ಭಯೋತ್ಪಾದಕರೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಓರ್ವ ಭಾರತೀಯ ಸೇನಾ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಸೇನೆಯು ಹೊಡೆದುರುಳಿಸಿದೆ.
ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಆದಿಲ್ ವಾನಿ ಎಂದು ಗುರುತಿಸಲಾಗಿದ್ದು, ಆತ ಮೂರು ದಿನಗಳ ಹಿಂದೆ ಪುಲ್ವಾಮದಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರದ ಬಡಗಿ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಗುರುತಿಸಲಾಗಿದೆ. ಪೂಂಚ್ ನ ಅರಣ್ಯ ಪ್ರದೇಶದಿಂದ ಭಯೋತ್ಪಾದಕರನ್ನು ಹೊರಹಾಕುವ ಬೃಹತ್ ಕಾರ್ಯಾಚರಣೆ ಕಳೆದ 10 ದಿನಗಳಿಂದ ನಡೆಯುತ್ತಿದೆ.
ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು.
ಲಷ್ಕರ್-ಎ-ತೊಯ್ಬಾದ ನೆರಳು ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ನ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಟ್ವೀಟ್ ನಲ್ಲಿ, “ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಆದಿಲ್ ಅಹ್ ವಾನಿ ಎಂದು ಗುರುತಿಸಲಾಗಿದೆ ಎರಡುವಾರಗಳಲ್ಲಿ ಇಲ್ಲಿಯವರೆಗೆ, 15 ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement