ಡ್ರಗ್ಸ್‌ ಪ್ರಕರಣ: ಬಾಲಿವುಡ್‌ ನಟ ಶಾರುಖ್​ ಪುತ್ರ ಆರ್ಯನ್​ ಖಾನ್​ಗೆ ಜಾಮೀನಿಲ್ಲ, ಜೈಲೇ ಗತಿ

ಮುಂಬೈ: ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಇಬ್ಬರ ಜಾಮೀನು ಅರ್ಜಿಯೂ ವಜಾಗೊಂಡಿದೆ.
ಜಾಮೀನು ಅರ್ಜಿ ಕುರಿತು ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತನ್ನ ತೀರ್ಪು ಪ್ರಕಟಿಸಿ ವಿಶೇಷ ಕೋರ್ಟ್ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜೈಲಿನಲ್ಲೇ ಇರಬೇಕಿದೆ.
ಅಕ್ಟೋಬರ್​ 2 ನೇ ತಾರೀಕು ಕಾರ್ಡೆಲಿಯ ಕ್ರೂಸ್​ ಶಿಪ್​ ಮೇಲೆ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಆರ್ಯನ್​ ಖಾನ್‌ ಅವರನ್ನು ವಿಚಾರಣೆ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ) ಅಧಿಕಾರಿಗಳು ​ಅ.3 ರಂದು ಬಂಧಿಸಿದ್ದರು. 23 ವರ್ಷ ವಯಸ್ಸಿನ ಆರ್ಯನ್ ಖಾನ್​ನೊಂದಿಗೆ ಇತರ 9 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಕಳೆದ 12 ದಿನಗಳಿಂದ ಮುಂಬೈನ ಅರ್ಥರ್​ ರಸ್ತೆ ಜೈಲಿನಲ್ಲಿರುವ ಆರ್ಯನ್‌ ಖಾನ್​ಗೆ ಈ ಮೊದಲು ಮ್ಯಾಜಿಸ್ಟ್ರೇಟ್​ ಕೋರ್ಟ್​ನಿಂದ ಜಾಮೀನು ಲಭಿಸಿರಲಿಲ್ಲ. ನಂತರ ವಿಶೇಷ ಸೆಷನ್ಸ್​ ಕೋರ್ಟ್​ನಲ್ಲಿ ಸಲ್ಲಿಕೆಯಾದ ಜಾಮೀನು ಅರ್ಜಿಯ ತೀರ್ಪನ್ನು ಇಂದಿಗೆ ಕಾದಿರಿಸಲಾಗಿತ್ತು. ಈಗ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ವಿ.ವಿ.ಪಾಟೀಲ್​ ಜಾಮೀನು ನಿರಾಕರಿಸಿದ್ದಾರೆ.
ಬಾಲಿವುಡ್‌ ಸೂಪರ್‌ಸ್ಟಾರ್ ಶಾರುಖ್ ಖಾನ್ ಮಗ 23 ವರ್ಷದ ಮಗ ಆರ್ಯನ್‌ ಖಾನ್‌ ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾನೆ ಮತ್ತು ಸದ್ಯಕ್ಕೆ ಅಲ್ಲಿಯೇ ಇರುತ್ತಾನೆ.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement