ಪ್ರತಿಭಟನೆ ನಡೆಸಿ, ಆದರೆ ರಸ್ತೆ ಸಂಚಾರ ಬಂದ್ ಮಾಡಬೇಡಿ : ರೈತರಿಗೆ ಸುಪ್ರೀಂ ಸೂಚನೆ

ನವದೆಹಲಿ: ಪ್ರತಿಭಟನೆ ನಡೆಸುವುದು ರೈತರ ಹಕ್ಕು ಪ್ರತಿಭಟನೆ ನಡೆಸಿ, ಆದರೆ ಜನ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬಂದ್ ಮಾಡುವುದನ್ನು ತಕ್ಷಣವೇ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಕಳೆದ ಹತ್ತು ತಿಂಗಳಿಂದ ದೆಹಲಿಯ ಗಡಿ ಭಾಗದ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಸ್ತೆ ಬಂದ್ ಮಾಡಿರುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಮೋನಿಕಾ ಅಗರ್ವಾಲ್ ಸೇರಿದಂತೆ ಹಲವಾರು ಮಂದಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ನ ಎಸ್.ಕೆ.ಕೌಲ್ ಅವರ ನೇತೃತ್ವದ ಪೀಠ, ನಮ್ಮ ಆದೇಶ ಪ್ರತಿಭಟನೆ ನಡೆಸುವ ಹಕ್ಕಿನ ವಿರುದ್ಧ ಅಲ್ಲ. ಹಲವಾರು ಮಂದಿ ಸಲ್ಲಿಸಿರುವ ಅರ್ಜಿಗಳು ಬಾಕಿ ಉಳಿದಿವೆ.

ಅಂತಿಮವಾಗಿ ಅವುಗಳಿಗೆ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರೈತರಿಗೆ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ ನಿರಂತರವಾಗಿ ರಸ್ತೆ ಸಂಚಾರವನ್ನು ಅನಿಶ್ಚಿತತವಾಗಿ ಬಂದ್ ಮಾಡಬಾರದು. ಜನರಿಗೂ ರಸ್ತೆಗಳಲ್ಲಿ ಸಂಚಾರ ಮಾಡುವ ಹಕ್ಕು ಇದೆ ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಲು ರೈತ ಸಂಘಟನೆಗಳಿಗೆ ಮೂರು ವಾರಗಳ ಕಾಲಾವಕಾಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ನಿಗದಿ ಮಾಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ