ರಾಜಸ್ಥಾನ: ಹೋಮ್‌ವರ್ಕ್ ಮಾಡದ ಕಾರಣ 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಸಾಯಿಸಿದ ಶಿಕ್ಷಕ…!

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಖಾಸಗಿ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ ಪರಿಣಾಮ ವಿದ್ಯಾರ್ಥಿ ಸತ್ತೇ ಹೋಗಿದ್ದಾನೆ. ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಥಳಿಸಿದ ಪರಿಣಾಮ ಬಲವಾದ ಹೊಡೆತ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ,. ವಿದ್ಯಾರ್ಥಿಯ ಸಾವಿಗೆ ಕಾರಣರಾದ ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ಈ ಘಟನೆ ನಡೆದ ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ದೋಟಾಸ್ರ ಈ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
13 ವರ್ಷದ ಗಣೇಶ್ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು, ಹೋಂ ವರ್ಕ್ ಪೂರ್ಣಗೊಳಿಸದ ಕಾರಣ ಶಿಕ್ಷಕ ಕೋಲಿನಿಂದ ಮನಸೋಇಚ್ಛೆ ಥಳಿಸಿದ್ದಾರೆ. ವಿದ್ಯಾರ್ಥಿ ಪರಿಪರಿಯಾಗಿ ಬೇಡಿಕೊಂಡರೂ ಬಿಡಡೆ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಆ ಬಾಲಕ ಮೃತಪಟ್ಟಿದ್ದಾನೆ ಎಂದು ಈ ಘಟನೆಯ ಬಗ್ಗೆ ಸಲಸಾರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸಂದೀಪ್ ವಿಷ್ಣೋಯ್ ಮಾಹಿತಿ ನೀಡಿದ್ದಾರೆ.
ತನ್ನ ಮಗ ಶಿಕ್ಷಕನಿಂದ ಹೊಡೆದ ನಂತರ ಅನಾರೋಗ್ಯಕ್ಕೆ ಒಳಗಾದ ಮತ್ತು ನಂತರ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಎಂದು ಆರೋಪಿಸಿ ತಂದೆ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ವಿಷ್ಣೋಯ್ ಹೇಳಿದರು
ಗಣೇಶನ ಶಿಕ್ಷಕರು ಕರೆ ಮಾಡಿ ಆತನ ಹೋಮ್‌ ವರ್ಕ್ ಮಾಡಿಲ್ಲ ಎಂದು ತಿಳಿಸಿದರು. ಸ್ವಲ್ಪ ಸಮಯದ ನಂತರ, ನನಗೆ ಮತ್ತೆ ಶಾಲೆಯಿಂದ ಕರೆ ಬಂದಿತು, ನನ್ನ ಮಗುವಿನ ಆರೋಗ್ಯ ಸರಿಯಿಲ್ಲ. ನಾನು ಶಾಲೆಗೆ ಬಂದಾಗ ಗಣೇಶ್ ನೆಲದ ಮೇಲೆ ಬಿದ್ದಿರುವುದನ್ನು ನಾನು ನೋಡಿದೆ‌ ಎಂದು ಮೃತನ ತಂದೆ ಓಂ ಪ್ರಕಾಶ್ ಹೇಳಿದ್ದಾರೆ. ವಿದ್ಯಾರ್ಥಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಜಾನಗಡ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಪ್ರಕಟಿಸಿದರು.
ಹೊಡೆತತಿಂದು ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಯಲ್ಲಿ ಬಾಲಕ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿ ಶಿಕ್ಷಕ 35 ವರ್ಷದ ಮನೋಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ