ಉತ್ತರಾಖಂಡ ಪ್ರವಾಹ : ಕರ್ನಾಟಕದ 92 ಮಂದಿ ಸುರಕ್ಷಿತ, ನೆಟ್ವರ್ಕ್ ಸಮಸ್ಯೆಯಿಂದ ಸಿಗದ ನಾಲ್ವರು

ಬೆಂಗಳೂರು: ಉತ್ತರಾಖಂಡದಲ್ಲಿ ಉಂಟಾಗಿರುವ ನೆರೆ ಹಾಗೂ ಭೂಕುಸಿತದಲ್ಲಿ ರಾಜ್ಯದ 96 ಮಂದಿ ಸಿಲುಕಿದ್ದು, 92 ಜನರು ಸುರಕ್ಷಿತವಾಗಿದ್ದಾರೆ, ನಾಲ್ವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ರಾತ್ರಿ 10 ಗಂಟೆಯಿಂದ ಬುಧವಾರ ಸಂಜೆ 6 ಗಂಟೆ ವರೆಗೆ ಸಹಾಯವಾಣಿಗೆ ಹತ್ತು ಕರೆಗಳು ಬಂದಿದ್ದು, 96 ಮಂದಿ ಉತ್ತರಾಖಂಡದ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದಾರೆ. ಈ ಪೈಕಿ 92 ಮಂದಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನುಳಿದ ನಾಲ್ವರ ಪೈಕಿ ಮೂವರು ನೆಟ್‌ವರ್ಕ್‌ ಸಮಸ್ಯೆಯಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿಸಲಾಗಿದೆ.
ಈ ಸಂಬಂಧ ಸಂತ್ರಸ್ತರು ಹಾಗೂ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಹಾಯವಾಣಿ
ರಾಜ್ಯದ ನೆರೆ ಸಂತ್ರಸ್ತರ ನೆರವಿಗಾಗಿ 24×7 ಸಹಾಯವಾಣಿ ತೆರೆದಿದ್ದು, ತುರ್ತು ಸಂದರ್ಭದಲ್ಲಿ 080-22340676 ಅಥವಾ ಟೋಲ್‌ಫ್ರೀ 080-1070ಗೆ ಕರೆ ಮಾಡಬಹುದು. ಕೂಡಲೇ ಉತ್ತರಖಂಡದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ ರಕ್ಷಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement